Home ಹರಪನಹಳ್ಳಿಯಲ್ಲಿ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಜಯಂತಿ
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಜಯಂತಿ

Share
ಸಾವಿತ್ರಿಬಾಯಿ ಫುಜೆ ಜಯಂತಿಯಲ್ಲಿ ಉತ್ತಮ ಶಿಕ್ಷಕಿಯರಿಗೆ ಪ್ರಶಸ್ತಿ ಪ್ರಧಾನ
Share

ಹರಪನಹಳ್ಳಿ : ಮಹಿಳೆಯರು ಶಿಕ್ಷಣದಿಂದ ದೂರ ಉಳಿದಿದ್ದ  ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.

ನಗರದ ತೆಗ್ಗಿನಮಠ ಸಭಾಂಗಣದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲ್ಲೂಕು ಸರ್ಕಾರಿ ನೌಕರರ ಸಂಘಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ 195 ನೇ ಸಾವಿತ್ರಿಬಾಯಿ ಫುಲೆ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಅಂದು ಹೋರಾಟ ಮಾಡಿ, ಎಲ್ಲ ಸಮಸ್ಯೆ ಎದುರಿಸಿ  ಗುರುಮಾತೆ ಸ್ಥಾನ ಪಡೆದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ ಅವರ ಹೋರಾಟ ನಮಗೆಲ್ಲಾ ಸ್ಪೂರ್ತಿಯಾಗಿದೆ. ಅಂತಹ ಮಹನೀಯರ ಹೆಸರಿನಲ್ಲಿ ಸಂಘ ಕಟ್ಟುವುದು ಮುಖ್ಯವಲ್ಲ, ಅವರಿಹೆ ಚ್ಯುತಿ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಶಿಕ್ಷಕರ ಸಂಘಟನೆಗಳ ನೆಪದಲ್ಲಿ ಕೆಲವು ಶಿಕ್ಷಕರು ಪಾಠ ಬೋಧನೆಗಿಂತ ಹೆಚ್ಚು ರಾಜಕಾರಣದಲ್ಲಿ ತಲ್ಲೀನ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸಾನ್ನಿಧ್ಯವಹಿಸಿದ್ದ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಲತಾ ಮಳ್ಳೂರು, ಜಿಲ್ಲಾಧ್ಯಕ್ಷೆ ಟಿ.ಎಚ್.ಎಂ. ಲತಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಿ.ಮನೋಹರ,  ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿ ದಿವಾಕರ ನಾರಾಯಣ ಮಾತನಾಡಿದರು.

ಸಾವಿತ್ರಿ ಬಾಯಿಫುಜೆ ಜಯಂತಿ ಪೊಟೊ

ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಿಕ್ಷಕಿ ಕೃಷ್ಣವೇಣಿ ಸೇರಿದಂತೆ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು 12 ಜನ ಶಿಕ್ಷಕಿಯರು ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ ಭಾಜನರಾದ 42 ಜನ ಶಿಕ್ಷಕಿಯರಿಗೆ ಪ್ರಶಸ್ತಿ ಪ್ರಧಾನ ಮಾಡಿ, ಸನ್ಮಾನಿಸಲಾಯಿತು.

ಸಾವಿತ್ರಿಬಾಯಿ ಫುಜೆ ಜಿಲ್ಲಾಮಟ್ಟದ ಜಯಂತಿ ಪಾಲ್ಗೊಂಡಿದ್ದ ನೂರಾರು ಶಿಕ್ಷಕಿಯರು

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಆರುಂಡಿ ಸುವರ್ಣಮ್ಮ, ಕಂಚಿಕೇರಿ ಜಯಲಕ್ಷ್ಮಿ, ಸರ್ಕಾರಿ ನೌಕರರ ಸಂಘದ ರಾಜ್ಯಪರಿಷತ್ ಸದಸ್ಯ ಮಂಜುನಾಥ ಪೂಜಾರ, ಎಂ.ಶರೀಫ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅದ್ಯಕ್ಷ ಗುರುಮೂರ್ತಿ, ಸಂಗಯ್ಯ ಹಿರೇಮಠ, ಕೆ.ಉಚ್ಚೆಂಗೆಪ್ಪ, ಮಂಜುನಾಥ ಪೂಜಾರ, ಎನ್.ಟಿ.ಸೋಮಪ್ಪ, ಬಿ.ಸೂರ್ಯನಾಯ್ಕ, ಕೆ.ಅಂಜಿನಪ್ಪ, ಕೆ.ಮರಿಯಪ್ಪ, ಗೂರಪ್ಪ ಪವಾರ್, ಗಿರಿರಾಜ ಎಲ್., ಲತಾಶ್ರೀ, ಶೋಭಾರಾಣಿ, ವಸಂತಮ್ಮ, ಶೈಲಜಾ, ಜೆ.ಬಸವಕುಮಾರ, ಜಮಾಲುದ್ದೀನ್, ಮಕ್ಬುಲ್ ಭಾಷ, ದೀಪಕ್, ವಿಜಯಕುಮಾರ, ಚನ್ನವೀರಪ್ಪ, ಮಂಜಪ್ಪ ಬಣಕಾರ, ಎಸ್.ಎಂ.ಕೊಟ್ರೇಶಯ್ಯ  ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.