Home ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್!
Homeರಾಜಕೀಯ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್!

Share
Share

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ ಪ್ರಥಮ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ, ವಿದ್ಯಾರ್ಥಿಗಳಿಗೆ ಹೊಸ ಹೆಸರಿನಲ್ಲಿ “ಉಚಿತ ಬಸ್ ಪಾಸ್” ನೀಡುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.

“ನನಗೆ ಜಾತಿ ಮತ್ತು ಧರ್ಮದಲ್ಲಿ ನಂಬಿಕೆಯಿಲ್ಲ, ಸರ್ವರಿಗೂ ಸಮಬಾಳು ನಮ್ಮ ಗುರಿ” ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಉಚಿತ ಬಸ್ ಪಾಸ್ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ತಿಳಿಸಿದರು.

54 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ
ಉದ್ಯೋಗಾಕಾಂಕ್ಷಿಗಳಿಗೂ ನೂತನ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 54,000 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು. ಈ ಕುರಿತು ಶೀಘ್ರದಲ್ಲೇ ಎಲ್ಲಾ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಸಿಎಂ ವಿವರಿಸಿದರು.

ಖಾಸಗಿ ವಲಯದಲ್ಲಿ ಕೆಲಸ ಹುಡುಕುತ್ತಿರುವ ಯುವಕರಿಗಾಗಿ ಸರ್ಕಾರವೇ ವಿಶೇಷ ಮುತುವರ್ಜಿ ವಹಿಸಲಿದ್ದು, ಒಂದು ತಿಂಗಳ ಒಳಗಾಗಿ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.

ಹಳ್ಳಿ ಹಳ್ಳಿಗಳಲ್ಲೂ ‘ಭಾರತ್ ಜೋಡೋ ಯುವಕ ಸಂಘ’
ಯುವಶಕ್ತಿಯನ್ನು ಸಬಲೀಕರಣಗೊಳಿಸಲು ಪಂಚಾಯತ್ ಮಟ್ಟದಲ್ಲಿ ಒಟ್ಟು 10,000 ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಸ್ಥಾಪಿಸುವುದು ನನ್ನ ಕನಸಿನ ಯೋಜನೆಯಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಗ್ರಾಮ ಪಂಚಾಯತ್ ಮಟ್ಟ 6,000 ಸಂಘಗಳು, ನಗರ ಪ್ರದೇಶ 4,000 ಸಂಘಗಳು, ಈ ಸಂಘಗಳ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ವಿಶೇಷವೆಂದರೆ, ಪ್ರತಿ ಯುವಕ ಸಂಘಕ್ಕೆ ಸರ್ಕಾರದಿಂದ **10 ಲಕ್ಷ ರೂಪಾಯಿ‌ ಧನಸಹಾಯ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.

ಆಸ್ತಿ ಇ-ಸ್ವತ್ತು ಸರಳೀಕರಣ: ‘ಬಿ ಖಾತೆ’ಯಿಂದ ‘ಎ ಖಾತೆ’ಗೆ ಮುಕ್ತಿ!

ರಾಜ್ಯದ ಜನತೆಗೆ ಮತ್ತೊಂದು ದೊಡ್ಡ ರಿಲೀಫ್ ಸಿಕ್ಕಿದ್ದು, ಆಸ್ತಿ ಖಾತೆಗಳ ಗೊಂದಲ ನಿವಾರಣೆಗೆ ಸರ್ಕಾರ ಮುಂದಾಗಿದೆ. ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಖಾತೆಗಳನ್ನು ಸರಿಪಡಿಸಿಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಲಾಗುವುದು. ‘ಬಿ ಖಾತೆ’ಯಿಂದ ‘ಎ ಖಾತೆ’ ಪಡೆಯುವ ನಿಯಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಹಾಗೂ ‘ಭೂ ಗ್ಯಾರಂಟಿ’ ಯೋಜನೆ ಜಾರಿಗೆ ತರಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ; ಬಿ.ಕೆ. ಹರಿಪ್ರಸಾದ್ ನೂತನ ಸಾರಥಿ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಜಾಗಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹೈಕಮಾಂಡ್ ನೇಮಕ ಮಾಡಿದ್ದು, ಶೀಘ್ರದಲ್ಲೇ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಾಗೂ ನೂತನ ಸಚಿವರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.