Home ಸುದ್ದಿಗಳು ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ಸಲಹೆ
ಸುದ್ದಿಗಳು

ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ಸಲಹೆ

Share
dysp harapanahalli
Share

ಹರಪನಹಳ್ಳಿ : ಯಾವುದೇ ರೀತಿಯ ತೊಂದರೆ ಆಗುತ್ತಿದ್ದರೆ ಮನೆ ಮನೆಗೆ ಬೇಟಿ ನೀಡುವ ಪೊಲೀಸರಿಗೆ ಸರಿಯಾದ ಮಾಹಿತಿಕೊಟ್ಟರೆ ನ್ಯಾಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ತಿಳಿಸಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮದ ದಲಿತ ಕಾಲೊನಿಯಲ್ಲಿ ಮಂಗಳವಾರ ಪರಿಶಿಷ್ಟ ಜಾತಿಯವರೊಂದಿಗೆ ನಡೆದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕಾಲೊನಿಯ ಮಕ್ಕಳು,ಯುವಕರು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಕಾಳಜಿವಹಿಸಬೇಕು. ಅವರಿಗೆ ಸೈಬರ್ ಕ್ರೈಮ್, ಬಾಲ್ಯ ವಿವಾಹ, ಪೊಕ್ಸೊ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ದಲಿತ ಸಮಾಜದ ಮುಖಂಡ ಪೂಜಾರ ಮರಿಯಪ್ಪ ಮಾತನಾಡಿ, ಗ್ರಾಮದಲ್ಲಿ ಎಲ್ಲ ಜನಾಂಗದವರು ಸಾಮರಸ್ಯ, ಸೌಹಾರ್ಧತೆಯಿಂದ ಜೀವನ ನಡೆಸುತ್ತಿದ್ದೇವೆ ಎಂದರು. ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ವಿಜಯಕೃಷ್ಣ ಹಾಗೂ ಮುಖಂಡರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.