Home ನಕಲಿ ಬಸ್ ಪಾಸ್ ವಿತರಣೆ : ಪ್ರಕರಣ ದಾಖಲು
Homeಅಪರಾಧ

ನಕಲಿ ಬಸ್ ಪಾಸ್ ವಿತರಣೆ : ಪ್ರಕರಣ ದಾಖಲು

Share
Share

ವಿಜಯನಗರ (ಹೊಸಪೇಟೆ) : ವಿದ್ಯಾರ್ಥಿಗಳಿಗೆ ಕಾನೂನು ಬಾಹಿರವಾಗಿ ನಕಲಿ ಬಸ್ ಪಾಸ್‌ಗಳನ್ನು ಸೃಷ್ಟಿಸಿ ವಿತರಿಸುವ ಮೂಲಕ ಸಾರಿಗೆ ನಿಗಮಕ್ಕೆ ವಂಚಿಸುತ್ತಿದ್ದ ಖಾಸಗಿ ಸೈಬರ್ ಕೇಂದ್ರದ ಅಂಗಡಿಯ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಗರಿಬೊಮ್ಮನಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ರಸ್ತೆಯಲ್ಲಿ ಸೈಬರ್ ಕೇಂದ್ರದಲ್ಲಿ ಕಾನೂನು ಬಾಹಿರವಾಗಿ ವಿಶ್ವ ಎಂಬ ವ್ಯಕ್ತಿ ವಿದ್ಯಾರ್ಥಿಗಳಿಂದ ರೂ. 200 ಪಡೆದು ನಕಲಿ ಬಸ್ ಪಾಸ್‌ಗಳನ್ನು ವಿತರಿಸಿರುವುದು ಎಂದು ತಿಳಿದುಬಂದಿದೆ. ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿತರಿಸುವ ಮೂಲಕ, ಸರ್ಕಾರದ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ನಿಗಮಕ್ಕೆ ಹಾಗೂ ಸರ್ಕಾರಕ್ಕೆ ಆರ್ಥಿಕ ವಂಚನೆ ಎಸಗಿರುವ ಕಾರಣ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ಆದ್ದರಿಂದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಅಧಿಕೃತ ವಿದ್ಯಾರ್ಥಿ ಬಸ್ ಪಾಸ್‌ಗಳನ್ನುಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕು. ಇತರೆ ಯಾವುದೇ ಖಾಸಗಿ ಕೇಂದ್ರಗಳಲ್ಲಿ ಪಾಸ್ ಪಡೆದರೆ ಅದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.