Home ಸುದ್ದಿಗಳು ದಾರ್ಶನಿಕ ಕನಕದಾಸ : ಜಿ.ಕರುಣಾಕರ ರೆಡ್ಡಿ
ಸುದ್ದಿಗಳು

ದಾರ್ಶನಿಕ ಕನಕದಾಸ : ಜಿ.ಕರುಣಾಕರ ರೆಡ್ಡಿ

Share
G.KARUNAKARA REDDY
Share

ಹರಪನಹಳ್ಳಿ : ತಮ್ಮ ಕೀರ್ತನೆಗಳಿಂದ ಸಮಾಜ ಸುಧಾರಣೆಗೆ ಶ್ರಮಿಸಿದ ಸಂತ, ಕವಿ, ಶ್ರೇಷ್ಠ ದಾರ್ಶನಿಕ, ಕನಕದಾಸರು ಭಕ್ತಿಯ ಮೂಲಕ ಶ್ರೀಕೃಷ್ಣ ಪರಮಾತ್ಮನ ಅನುಗ್ರಹ ಪಡೆಯುವಲ್ಲಿ ಯಶಸ್ವಿಯಾದರು ಎಂದು ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಹೇಳಿದರು.

ನಗರದ ಬಿಜೆಪಿ ಮಂಡಲ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಭಕ್ತ ಕನಕದಾಸರ ಜಯಂತಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಭಕ್ತ ಕನಕದಾಸರು ನಾಡಿಗೆ ಕೀರ್ತನೆಗಳ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೀರ್ತನೆಗಳು ಸಮಾಜದಲ್ಲಿ ಅಂಕುಡೊಂಕು ತಿದ್ದುವುದು, ಸಮಾಜದ ಸದೃಢತೆ ಕಾಪಾಡಿಕೊಳ್ಳಲು ಸಹಕಾರಿ ಆಗಿವೆ ಎಂದು ಕನಕದಾಸರ ಜೀವನಕಥೆಯನ್ನು ಸ್ಮರಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ, ಪುರಸಭೆ ಸದಸ್ಯರಾದ ಕಿರಣ್ ಶ್ಯಾನುಬೋಗ, ಜಾವಿದ್, ಮುಖಂಡರಾದ ಆರ್.ಲೋಕೇಶ್, ಮತ್ತಿಹಳ್ಳಿ ಕೆಂಚಪ್ಪ, ಕುರುಬ ಸಮಾಜದ ಗೋಣೆಪ್ಪ, ಕೆಂಚಪ್ಪ, ಮಹಾಂತೇಶ್, ಉಪ್ಪಾರ ತಿಮ್ಮಣ್ಣ, ಪ್ರಸನ್ನ, ರಮೇಶ್, ಮಂಜಣ್ಣ, ಬಸವನಗೌಡ, ಯಮುನಪ್ಪ, ರಾಗಿಮಸಲವಾಡ ಮಹಾಂತೇಶ್, ಮಲ್ಲೇಶ್, ಪೂಜಾರ ಮಹೇಶ್ ಹಾಗೂ ಕುರುಬ ಸಮಾಜದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.