Home ಹೊಸಪೇಟೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ 892ನೇ ಜಯಂತಿ ಸಂಭ್ರಮ
Homeಸುದ್ದಿಗಳು

ಹೊಸಪೇಟೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ 892ನೇ ಜಯಂತಿ ಸಂಭ್ರಮ

Share
Share

ವಿಜಯನಗರ(ಹೊಸಪೇಟೆ) : 12ನೇ ಶತಮಾನದಲ್ಲೇ ರಕ್ತ ಕ್ರಾಂತಿಯ ಬದಲು ವೈಚಾರಿಕ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶಿವಶರಣ ಹಡಪದ ಅಪ್ಪಣ್ಣನವರ ತತ್ವಗಳು ಮತ್ತು ಚಿಂತನೆಗಳು ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.

ತಾಲೂಕಿನ ಅನಂತಶನಯನಗುಡಿ ರಾಯಣ್ಣ ಕಾಲೋನಿಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣನವರ 892ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅನುಭವ ಮಂಟಪದಲ್ಲಿ ಬಸವಣ್ಣನವರ ಜೊತೆಗೂಡಿ ಕಾರ್ಯನಿರ್ವಹಿಸಿದ ಹಡಪದ ಅಪ್ಪಣ್ಣನವರು, ಅಂದಿನ ಕಾಲದ ಮೌಢ್ಯತೆ, ಅಂಧಶ್ರದ್ಧೆ ಮತ್ತು ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದರು. ಶಸ್ತ್ರಾಸ್ತ್ರಗಳ ರಕ್ತ ಕ್ರಾಂತಿ ಮಾಡದೆ, ಆಲೋಚನೆ ಮತ್ತು ವಿಚಾರಗಳ ಮೂಲಕ ವೈಚಾರಿಕ ಕ್ರಾಂತಿ ಹುಟ್ಟುಹಾಕಿದರು.

ಅಂದಿನ ಕಾಲದಲ್ಲಿ ಜನರ ಕಾಯಕ, ವೃತ್ತಿಯ ಆಧಾರದ ಮೇಲೆ ಮೇಲು-ಕೀಳು ಎಂಬ ತಾರತಮ್ಯ ಮಾಡುವ ವ್ಯವಸ್ಥೆಯಿತ್ತು. ಆದರೆ ಅನುಭವ ಮಂಟಪದ ಮೂಲಕ mಪ್ರತಿಯೊಬ್ಬ ವ್ಯಕ್ತಿಯ ಪ್ರತಿಭೆ ಮತ್ತು ಕಾಯಕಕ್ಕೆ ಆದ್ಯತೆ ನೀಡಿ, ಸರ್ವರಿಗೂ ಸಮಬಾಳು-ಸಮಪಾಲು ಎಂಬ ತತ್ವ ಸಾರಿದರು. ಪ್ರಸ್ತುತ ಆಧುನಿಕ ತಂತ್ರಜ್ಞಾನ ಬೆಳೆದಿದ್ದರೂ ಸಹ, ಸಂವಿಧಾನದ ಮೂಲಭೂತ ಹಕ್ಕುಗಳು ನಮ್ಮ ಮುಂದಿದ್ದರೂ ಇಂದಿಗೂ ಸಮಾಜದಲ್ಲಿ ಅಸಮಾನತೆ ಕಾಣಸಿಗುತ್ತಿವೆ.

ಇಂತಹ ಸಂದರ್ಭದಲ್ಲಿ ಹಡಪದ ಅಪ್ಪಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವುದು ಮತ್ತು ಅವರ ವಚನಗಳ, ತತ್ವಾದರ್ಶಗಳು ಮೈಗೂಡಿಸಿಕೊಳ್ಳಬೇಕು ಎಂದರು. ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಬಸ್ವರಾಜ್ ಟಿ.ಹೆಚ್ ಉಪನ್ಯಾಸ ನೀಡಿದರು. ಸಿದ್ದಲಿಂಗಸ್ವಾಮಿ ಕೊಟ್ಟೂರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಜಾಗತಿಕ ಲಿಂಗಾಯತ ಮಹಸಭೆ ಜಿಲ್ಲಾಧ್ಯಕ್ಷ ಮಾವಿನಹಳ್ಳಿ ಬಸವರಾಜ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ್, ಬಸವ ಬಳಗದ ಅಧ್ಯಕ್ಷ ಬಸವ ಕಿರಣ ಸ್ವಾಮಿ, ಹಡಪದ ಹಪ್ಪಣ್ಣ
ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಮಲ್ಲಪ್ಪ, ಕಾರ್ಯದರ್ಶಿ ಕೊಟ್ರೇಶಪ್ಪ ಹೆಚ್. ಗೌರವಾದ್ಯಕ್ಷ ಈರಪ್ಪ ಹೆಚ್ ಮಲಪನಗುಡಿ ಸೇರಿದಂತೆ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.