Home ಸುದ್ದಿಗಳು ಹಂಪಿಯಲ್ಲಿ ಶೀಘ್ರವೇ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’
ಸುದ್ದಿಗಳು

ಹಂಪಿಯಲ್ಲಿ ಶೀಘ್ರವೇ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’

Share
 hampi-street-food-hub-update
Share

ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಇನ್ನು ಮುಂದೆ ಒಂದೇ ಸೂರಿನಡಿ ವೈವಿಧ್ಯಮಯ ಮತ್ತು ಗುಣಮಟ್ಟದ ಆಹಾರ ಖಾದ್ಯಗಳು ಲಭ್ಯವಾಗಲಿವೆ. ಕೇಂದ್ರ ಸರ್ಕಾರದ ‘ಪಿ.ಎಂ. ಸ್ವನಿಧಿ’ ಯೋಜನೆಯಡಿ ಹಂಪಿಯಲ್ಲಿ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’ ಸ್ಥಾಪಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಈ ಮಹತ್ವದ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಂಪಿಯ ಪಾರ್ಕಿಂಗ್ ಪ್ರದೇಶದ ಸಮೀಪವಿರುವ ಗುತ್ತಿಲ್ಯಾಂಡ್ ಹಾಗೂ ದೊಡ್ಡ ಆಲದ ಮರದ ಎದುರು ಮಳಿಗೆಗಳನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಒಂದು ಕ್ಲಸ್ಟರ್ ನಿರ್ಮಾಣಕ್ಕೆ ಸುಮಾರು 4 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ತಾತ್ಕಾಲಿಕ ಮಳಿಗೆಗಳ ಮೂಲಕ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ.

ಪ್ರತಿ ಫುಡ್ ಹಬ್‌ನಲ್ಲಿ ಸುಮಾರು 50 ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗುವುದು. ಗ್ರಾಹಕರಿಗೆ ಶುದ್ಧ ಕುಡಿಯುವ ನೀರು, ನೆರಳು ಮತ್ತು ಸ್ವಚ್ಛವಾದ ಪರಿಸರವನ್ನು ಒದಗಿಸುವುದು ಯೋಜನೆಯ ಆದ್ಯತೆಯಾಗಿದೆ. ರಾಜ್ಯದಲ್ಲಿ ಚಾಮುಂಡಿ ಬೆಟ್ಟ, ಬೇಲೂರು-ಹಳೇಬೀಡು ಸೇರಿದಂತೆ ಆಯ್ದ 5 ಪ್ರಮುಖ ಪ್ರವಾಸಿ ತಾಣಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದ್ದು, ಅದರಲ್ಲಿ ಹಂಪಿ ಸ್ಥಾನ ಪಡೆದಿರುವುದು ವಿಶೇಷ. ಈ ಹಬ್‌ನಿಂದ ಸ್ಥಳೀಯ ವ್ಯಾಪಾರಿಗಳ ಆರ್ಥಿಕ ಸಬಲೀಕರಣದ ಜೊತೆಗೆ, ಹಂಪಿಯ ಪ್ರವಾಸೋದ್ಯಮಕ್ಕೂ ಹೊಸ ಕಳೆ ಬರಲಿದೆ ಎಂದು ಜಿಲ್ಲಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಹಂಪಿ ಗ್ರಾಮ ಪಂಚಾಯಿತಿ ಮತ್ತು ಕಮಲಾಪುರ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ.

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.