Home ಫೆಬ್ರವರಿ 13 ರಿಂದ ‘ಹಂಪಿ ಉತ್ಸವ-2026’ ಆಚರಣೆ :  ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್
Homeಸುದ್ದಿಗಳು

ಫೆಬ್ರವರಿ 13 ರಿಂದ ‘ಹಂಪಿ ಉತ್ಸವ-2026’ ಆಚರಣೆ :  ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

Share
Share

ಫೆಬ್ರವರಿ 13 ರಿಂದ ‘ಹಂಪಿ ಉತ್ಸವ-2026’ ಆಚರಣೆ :  ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಹಂಪಿ ಉತ್ಸವ ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ  ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಹಂಪಿ ಉತ್ಸವ ಲೊಗೊ
ಅವರು ಬುಧವಾರ ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊAಡರು.
ಉದ್ಘಾಟನೆ: ಫೆಬ್ರವರಿ 13ರ ಸಂಜೆ ಮಾನ್ಯ ಮುಖ್ಯಮಂತ್ರಿಗಳು ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ದಿನಾಂಕದ ಹಿನ್ನೆಲೆ: ಈ ಹಿಂದೆ ಎಂ.ಪಿ. ಪ್ರಕಾಶ್ ಅವರ ಕಾಲದಲ್ಲಿ ನವೆಂಬರ್‌ನಲ್ಲಿ ಉತ್ಸವ ನಡೆಯುತ್ತಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿ ಕಳೆದ ವರ್ಷಗಳಿಂದ ಫೆಬ್ರವರಿಯಲ್ಲಿ ನಡೆಸಲಾಗುತ್ತಿದೆ. ಈ ಬಾರಿಯೂ ಫೆಬ್ರವರಿ 13ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ.
ಉತ್ಸವ ಆಚರಣೆಗೆ 22ಕೋಟಿ ಪ್ರಸ್ತಾವನೆ: ಉತ್ಸವದ ಯಶಸ್ವಿ ಆಚರಣೆಗಾಗಿ ಈ ಬಾರಿ ₹22 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ 16 ಕೋಟಿ ಅನುದಾನ ನೀಡಲಾಗಿತ್ತು.
ಕಲಾವಿದರ ಆಯ್ಕೆ: ರಾಷ್ಟ್ರ ಮತ್ತು ರಾಜ್ಯ ಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸುವ ಕುರಿತು ನಾಳೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಹAಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಉತ್ಸವದಲ್ಲಿಯೂ ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದರು.
ಈ ವೇಳೆ ಸಂಸದರಾದ ಈ.ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಹುಡಾ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಹ್ನಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.