Home ಅರಸಿಕೇರೆಯಲ್ಲಿ ನಾಗರ ಪಂಚಮಿ ಸಡಗರ; ಶ್ರೀ ದಂಡಿನ ದುರುಗಮ್ಮ ದೇವಿಯ ವೈಭವದ ಮೆರವಣಿಗೆ
Homeಸುದ್ದಿಗಳು

ಅರಸಿಕೇರೆಯಲ್ಲಿ ನಾಗರ ಪಂಚಮಿ ಸಡಗರ; ಶ್ರೀ ದಂಡಿನ ದುರುಗಮ್ಮ ದೇವಿಯ ವೈಭವದ ಮೆರವಣಿಗೆ

Share
Share

ಹರಪನಹಳ್ಳಿ: ತಾಲೂಕಿನ ಅರಸಿಕೇರೆ ಗ್ರಾಮದಲ್ಲಿ ನಾಗರ ಪಂಚಮಿ ಹಬ್ಬದ ಶುಭ ಸಂದರ್ಭದಲ್ಲಿ ಶ್ರೀ ದಂಡಿನ ದುರುಗಮ್ಮ ದೇವಿಯ ವೈಭವದ ಮೆರವಣಿಗೆಯನ್ನು ಅತ್ಯಂತ ಶ್ರದ್ಧೆ ಮತ್ತು ವಿಜೃಂಭಣೆಯಿಂದ ನೆರವೇರಿಸಲಾಯಿತು.ನಾಗರ ಪಂಚಮಿಯ ಸದುದ್ದೇಶದಿಂದ ಶ್ರೀ ದಂಡಿನ ದುರುಗಮ್ಮ ದೇವಿಯ ಮೂರ್ತಿಗೆ ನಾನಾ ಬಗೆಯ ಪುಷ್ಪಗಳು ಹಾಗೂ ಆಭರಣಗಳಿಂದ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನೆರವೇರಿಸಲಾಯಿತು.

ಗ್ರಾಮದ ಕ್ಷೇಮ, ಸಮೃದ್ಧಿ ಹಾಗೂ ನವರಸಪೂರ್ಣ ಜೀವನಕ್ಕಾಗಿ ದೇವಿಗೆ ವಿಶೇಷ ಹರಕೆ ಮತ್ತು ಪೂಜೆಗಳನ್ನು ಸಲ್ಲಿಸಲಾಯಿತು.ಗ್ರಾಮದ ಪ್ರಮುಖ ರಸ್ತೆಗಳು ಮತ್ತು ಬೀದಿಗಳಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ವೈಭವದಿಂದ ಮೆರವಣಿಗೆ ಮಾಡಲಾಯಿತು.ತಮಟೆ,ಹಾಗೂ ಸಾಂಪ್ರದಾಯಿಕ ಮಂಗಳವಾದ್ಯಗಳ ನಿನಾದದೊಂದಿಗೆ ಭಕ್ತರು ನೃತ್ಯ ಮಾಡುತ್ತಾ ಮೆರವಣಿಗೆಗೆ ಮೆರುಗು ತಂದರು.

ಗ್ರಾಮದ ಮುಖಂಡರು, ರೈತರು, ತಾಯಂದಿರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದರು. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಮನೆಗಳ ಮುಂದೆ ರಂಗೋಲಿ ಬಿಡಿಸಿ, ದೇವಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ನಾಗರ ಪಂಚಮಿಯ ಹಬ್ಬದ ಸಡಗರದೊಂದಿಗೆ ದಂಡಿನ ದುರುಗಮ್ಮ ದೇವಿಯ ಮೆರವಣಿಗೆಯು  ಭಕ್ತಿ, ಸೌಹಾರ್ದತೆ ಮತ್ತು ಸಾಂಸ್ಕೃತಿಕ ಐಕ್ಯತೆಗೆ ಸಾಕ್ಷಿಯಾಯಿತು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.