Home ಪ್ರತಿಯೊಬ್ಬರೂ ಅರೋಗ್ಯವನ್ನು ಕಾಪಾಡಿಕೊಳ್ಳಿ : ವೈ.ಡಿ.ಲಕ್ಷ್ಮಿದೇವಿ ಅಣ್ಣಪ್ಪ.
Homeಆರೋಗ್ಯ

ಪ್ರತಿಯೊಬ್ಬರೂ ಅರೋಗ್ಯವನ್ನು ಕಾಪಾಡಿಕೊಳ್ಳಿ : ವೈ.ಡಿ.ಲಕ್ಷ್ಮಿದೇವಿ ಅಣ್ಣಪ್ಪ.

Share
Share

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ರವರ ಸಹಕಾರದೊಂದಿಗೆ ದಾವಣಗೆರೆಯ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರೀತಿ ಆರೈಕೆ ಟ್ರಸ್ಟ್ ದಾವಣಗೆರೆ, ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಲಕ್ಷ್ಮಿ ನರಸಿಂಹ ಸೌಹಾರ್ದ ಬ್ಯಾಂಕಿನ ಅಧ್ಯಕ್ಷರಾದ ಲಕ್ಷ್ಮಿದೇವಿ ಅಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರ ಅನುಕೂಲಕ್ಕಾಗಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿದ್ದು ರೋಗ ನಿವಾರಣೆಗಾಗಿ ದೂರದ ದಾವಣಗೆರೆ, ಬೆಂಗಳೂರಿಗೆ ಹೋಗಬೇಕಾಗಿದೆ, ಬಡವರ ಅನುಕೂಲಕ್ಕಾಗಿ ಇಲ್ಲಿಗೆ ನುರಿತ ವೈದ್ಯರನ್ನು ಕರೆಸಿ ತಪಾಸಣೆಗೊಳಪಡಿಸಲಾಗಿದೆ.

ಪ್ರತಿಯೊಬ್ಬರೂ ಅರೋಗ್ಯದ ಬಗ್ಗೆ ಕಾಳಜಿ ವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.ಡಾ.ರವಿಕುಮಾರ್ ಟಿ.ಜಿ. ಶಸ್ತ್ರ ಚಿಕಿತ್ಸೆ ತಜ್ಞರು ಮತ್ತು ಜನರಲ್ ಸಜ್ಜನ್ ಮಾತನಾಡಿ:-
ಅರೋಗ್ಯ ಶಿಬಿರದಲ್ಲಿ ನುರಿತ ವೈದ್ಯರುಗಳ ತಂಡ, ಕೀಲು ಮೂಳೆ,ಹೃದಯ, ಪಿಜಿಸಿಯನ್, ಕ್ಯಾನ್ಸರ್ ಹಾಗೂ ಮೂತ್ರಪಿಂಡ ತಜ್ಞರನ್ನು ಕರೆಸಿದ್ದೇವೆ.

ಒಂದು ಕಾಯಿಲೆ ಪರೀಕ್ಷೆ ಮಾಡಿಸಲು ದಾವಣಗೆರೆ ಹಾಗೂ ಬೆಂಗಳೂರಿಗೆ ಹೋದರೆ ಐದು ಹಾಗೂ ಹತ್ತು ಸಾವಿರ ತೆಗೆದುಕೊಳ್ಳುತ್ತೇವೆ. ಇಂತಹ ಶಿಬಿರದಲ್ಲಿ ಪಾಲ್ಗೊಂಡರೆ ಎಲ್ಲಾ ಕಾಯಿಲೆಗಳ ಪರೀಕ್ಷೆಗಳನ್ನು ಮಾಡಿಸಬಹುದು, ಈ ಅವಕಾಶದ ಸದ್ಭಳಕೆ ಮಾಡಿಕೊಳ್ಳಬೇಕು, ಈ ಉಚಿತ ಶಿಬಿರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಹಾಗೂ ಅವರ ಕುಟುಂಬದ ಸಹಕಾರದೊಂದಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಿರಿ ಎಂದು ಹೇಳಿದರು. ಈ ಶಿಬಿರದಲ್ಲಿ 500 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೊಳಪಟ್ಟಿದ್ದರು.ಇದೇ ಸಂದರ್ಭದಲ್ಲಿ ಲಕ್ಷ್ಮಿ ನರಸಿಂಹ ಸೌಹಾರ್ದ ಬ್ಯಾಂಕಿನ ಅಧ್ಯಕ್ಷೆ ವೈ.ಡಿ.ಲಕ್ಷ್ಮೀದೇವಿ ಅಣ್ಣಪ್ಪ, ಆರೈಕೆ ಆಸ್ಪತ್ರೆಯ ಡಾ. ರವಿಕುಮಾರ್ ಟಿ.ಜಿ., ನಿಚ್ಚವ್ವನಹಳ್ಳಿ ಸುರೇಶ್,ವಿನೋದ್, ವಿಜಯ್ ಕುಮಾರ್,ಸೌಹಾರ್ದ ಬ್ಯಾಂಕಿನ ಸಿಬ್ಬಂದಿಗಳು,ವೈದ್ಯಾಧಿಕಾರಿಗಳು ಹಾಗೂ ರೋಗಿಗಳು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.