Home ಸುದ್ದಿಗಳು ಕೋಲಶಾಂತೇಶ್ವರ ಸ್ವಾಮೀಜಿ ನಡೆದಾಡುವ ದೇವರು : ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿಗಳು

ಕೋಲಶಾಂತೇಶ್ವರ ಸ್ವಾಮೀಜಿ ನಡೆದಾಡುವ ದೇವರು : ಡಾ.ಪ್ರಭಾ ಮಲ್ಲಿಕಾರ್ಜುನ್

Share
arsikere
Share

ಹರಪನಹಳ್ಳಿ: ಬಸವೇಶ್ವರರಂತೆ ಶಾಂತಲಿಂಗ ದೇಶೀಕೇಂದ್ರ ಮಹಾಸ್ವಾಮಿಗಳು ಕಾಯಕ ಯೋಗಿಗಳು ಹಾಗೂ ನಡೆದಾಡುವ ದೇವರಾಗಿದ್ದಾರೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು.

ತಾಲೂಕಿನ ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರ ಮಠದಲ್ಲಿ ಬಸವ ಜಯಂತಿ ಪ್ರಯುಕ್ತ ಏರ್ಪಡಿಸಲಾಗಿದ್ದ 42ನೇ ವರ್ಷದ ಸಾಮೂಹಿಕ ವಿವಾಹ ಕಲ್ಯಾಣ ಮಹೋತ್ಸವ ಹಾಗೂ ತೊಟ್ಟಿಲು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ 42 ವರ್ಷಗಳಿಂದ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿರುವ ಶ್ರೀಗಳು, ಸ್ವತಃ ಕೃಷಿ ಮಾಡಿ ಕಾಯಕ ಯೋಗಿಗಳಾಗಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾದಾನ ಹಾಗೂ ಅನ್ನದಾಸೋಹ ಮಾಡುತ್ತಿದ್ದಾರೆ ಎಂದು ಸಂಸದರು ಶ್ಲಾಘಿಸಿದರು. ಹೊಸ ಜೀವನಕ್ಕೆ ಕಾಲಿಟ್ಟಿರುವ ದಂಪತಿಗಳು ಅತ್ತೆ-ಮಾವಂದಿರನ್ನು ತಂದೆ-ತಾಯಿಯಂತೆ ಕಂಡು, ಪ್ರೀತಿ-ವಿಶ್ವಾಸದಿಂದ ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಹಾರೈಸಿದರು.  ಕ.ಸಾ.ಪ ಅಧ್ಯಕ್ಷ ಡಾ.ನಿಷ್ಟಿ ರುದ್ರಪ್ಪ ಮಾತನಾಡಿ, ಪ್ರತಿಷ್ಠೆಗಾಗಿ ಸಾಲ ಮಾಡಿ ಅದ್ದೂರಿ ಮದುವೆಯಾಗುವ ಬದಲು, ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿರುವ ಇಂತಹ ಸರಳ ಸಾಮೂಹಿಕ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದರು. ಮೈಸೂರಿನ ಇತಿಹಾಸ ಸಂಶೋಧಕ ಡಾ.ವಿ.ಎಂ.ವಿಶ್ವನಾಥ್ ಅವರು, ಸಮಾಜದ ಅನಿಷ್ಟ ಪದ್ಧತಿ ಹಾಗೂ ಮೂಢನಂಬಿಕೆಗಳನ್ನು ತೊಡೆದುಹಾಕಲು ಶ್ರಮಿಸುತ್ತಿರುವ ಶ್ರೀಗಳ ಕಾರ್ಯವನ್ನು ಕೊಂಡಾಡಿದರು. 24 ಜೋಡಿಗಳು ದಾಂಪತ್ಯಕ್ಕೆ ಅಡಿಯಿಟ್ಟರು.

ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು. ಪಿ.ಎಸ್.ಐ ವಿಜಯ್ ಕೃಷ್ಣ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ಹೊಸಕೋಟೆ ಶರಣಪ್ಪ, ಡಗ್ಗಿ ಬಸಾಪುರದ ವೀರಬಸಪ್ಪ, ಅರಸೀಕೆರೆ ಬಿ.ರಾಮಣ್ಣ,ಎ.ಹೆಚ್.ಕೊಟ್ರೇಶ್, ಯರಬಳ್ಳಿ ವಿಜಯ್ ಕುಮಾರ್,ಬಸಾಪುರದ ಕೆ.ಮಂಜುನಾಥ್,ಐ.ಸಲಾಂ ಸಾಹೇಬ್, ಕೆ.ಲಕ್ಷ್ಮಿ ಮಹಾಂತೇಶ್, ಇಟ್ಟಿಗಿಹಳ್ಳಿ ಬಸವರಾಜ್,ಹದಡಿ ಅಜ್ಜಪ್ಪ, ಎ.ಹೆಚ್.ಆಕಾಶ್ ಇದ್ದರು.

ಪ್ರಶಸ್ತಿ ಪುರಸ್ಕೃತರ ವಿವರ

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಪ್ರಶಸ್ತಿಯ ಹೆಸರು ಪುರಸ್ಕೃತರು ಸಾಧನೆಯ ಕ್ಷೇತ್ರ / ಪರಿಚಯ
ಬಸವ ಗುರುಕಿರಣ ಪ್ರಶಸ್ತಿ ಡಾ.ನಿಷ್ಟಿ ರುದ್ರಪ್ಪ ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು
ಕೋಲಶಾಂತೇಶ್ವರ ಸೇವಾ ಪ್ರಶಸ್ತಿ ಟಿ.ಶ್ರೀನಿವಾಸ್ ಶಿಲ್ಪಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಶಿಲ್ಪಿಗಳು, ದಾವಣಗೆರೆ
ಘನಮಹಾಕಾರ್ಯ ಪ್ರಶಸ್ತಿ ಕವಳಿಬಸಪ್ಪ ಶೇಖರಪ್ಪ ಖ್ಯಾತ ಅನುಭವಿ ಕೃಷಿಕರು, ಕಾವಲಹಳ್ಳಿ

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.