Home   ಸ್ವಯಂ ಚಾಲಿತ ಮ್ಯೂಟೇಷನ್ ಜಾರಿ – ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು
Home

  ಸ್ವಯಂ ಚಾಲಿತ ಮ್ಯೂಟೇಷನ್ ಜಾರಿ – ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು

Share
Share

ಹರಪನಹಳ್ಳಿ: ಕಂದಾಯ ಇಲಾಖೆ ಜಾರಿಗೆ ತಂದಿರುವ ಸ್ವಯಂ ಚಾಲಿತ ಮ್ಯೂಟೇಷನ್ ವ್ಯವಸ್ಥೆಯನ್ನು ತಾಲೂಕಿನ ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ.ವಿ. ಗಿರೀಶ್ ಬಾಬು ಮನವಿ ಮಾಡಿದ್ದಾರೆ.

ಪಟ್ಟಣದ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ಗೃಹ ಕಚೇರಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆ. 24ರಂದು ನಡೆಸಿದ ವಿಡಿಯೊ ಸಂವಾದದಲ್ಲಿ ನೀಡಿದ ನಿರ್ದೇಶನದಂತೆ,  ಸ್ವಯಂ ಚಾಲಿತ ಮ್ಯೂಟೇಷನ್ ಪ್ರಕ್ರಿಯೆ ಜಾರಿಗೆ ಬಂದಿದೆ. ನೊಂದಣಿಯಾದ ಕ್ರಯ, ವಿಭಾಗ, ದಾನ ಸೇರಿದಂತೆ ವಿವಿಧ ಹಕ್ಕುಬದಲಾವಣೆ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳು ನೋಂದಣಿಯಾದ ಬಳಿಕ ಏಳು ದಿನಗಳೊಳಗೆ ಯಾವುದೇ ತಕರಾರು ದಾಖಲಾಗದಿದ್ದರೆ, ಪ್ರತ್ಯೇಕ ಅನುಮೋದನೆಯ ಅಗತ್ಯವಿಲ್ಲದೆ ಮ್ಯೂಟೇಷನ್ ಸ್ವಯಂ ಅಂಗೀಕಾರವಾಗಲಿದೆ ಎಂದು ವಿವರಿಸಿದರು.

ಈ ವ್ಯವಸ್ಥೆಯಿಂದ ರೈತರಿಗೆ ಕಚೇರಿಗಳ ಸುತ್ತಾಟ ಕಡಿಮೆಯಾಗಲಿದ್ದು, ಹಕ್ಕುಬದಲಾವಣೆ ಪ್ರಕ್ರಿಯೆ ವೇಗವಾಗಿ ಪೂರ್ಣಗೊಳ್ಳಲಿದೆ. ಜೊತೆಗೆ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಾಗಿರುವುದರಿಂದ ಅನಧಿಕೃತ ಹಕ್ಕು ಬದಲಾವಣೆಗಳನ್ನು ತಡೆಹಿಡಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಇನ್ನೂ ಆಧಾರ್ ಜೋಡಣೆ ಮಾಡಿಸದ ಖಾತೆದಾರರು ತಮ್ಮ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಸಬಾ, ಅರಸೀಕೆರೆ, ಚಿಗಟೇರಿ ಹಾಗೂ ತೆಲಿಗಿ ಹೋಬಳಿಗಳ ಕಂದಾಯ ನಿರೀಕ್ಷಕರಾದ ರಾಘವೇಂದ್ರ ರಾವ್, ನನ್ಯಾಸಾಬ್, ಪ್ರಭಾಕರ್ ಹಾಗೂ ನಾಗರಾಜ್ ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.