Home ಹರಪನಹಳ್ಳಿ : ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ
Homeಸುದ್ದಿಗಳು

ಹರಪನಹಳ್ಳಿ : ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ

Share
ಹರಪನಹಳ್ಳಿ : ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ
Share

ಹರಪನಹಳ್ಳಿ : ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ತಾಲ್ಲೂಕಿನ ಹಲುವಾಗಲು ಗ್ರಾಮದ ಮಾವಿನಗುಡಿ ಹತ್ತಿರವಿರುವ ಕುಟುಂಬಸ್ಥರು ಸೋಮವಾರ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಭಾರತ ಕಮ್ಯುನಿಷ್ಟ್ ನೇತೃತ್ವದಲ್ಲಿ ಮಾವಿನಗುಡಿ ಕುಟುಂಬಸ್ಥರು ನಗರಕ್ಕೆ ಆಗಮಿಸಿ, ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ 30 ಕುಟುಂಬಗಳು 30 ವರ್ಷಗಳಿಂದ ಮನೆಕಟ್ಟಿಕೊಂಡು ವಾಸ ಮಾಡುತ್ತಿವೆ. ಗ್ರಾಮ ಪಂಚಾಯಿತಿ ಡಿಮ್ಯಾಂಡ್ ಪುಸ್ತಕದಲ್ಲಿ ನೊಂದಣಿಯಾಗಿ, ಮನೆ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ ಇವರಿಗೆ ವಿದ್ಯುತ್ ಸೌಕರ್ಯ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆಯಿಲ್ಲದೇ ಪರದಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಪೊಲೀಸ್ ಠಾಣೆಯಿಂದ ಈಗ ತಾತ್ಕಾಲಿಕವಾಗಿ ಪಡೆದಿರುವ ವಿದ್ಯುತ್ ತಂತಿ ಬದಲಾಯಿಸಬೇಕು. ಮಾವಿನಗುಡಿ ಬಳಿಗೆ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಇವರು ವಾಸವಿರುವ ಪ್ರದೇಶದ ಮೂಲಕ ಕುಂಚೂರು, ಹಲುವಾಗಲು ಗ್ರಾಮಗಳಿಗೆ ಓಡಾಡುವ ಸಾರಿಗೆ ಬಸ್‍ ಗಳು ನಿಲುಗಡೆ ಮಾಡಬೇಕು. ಸಮಸ್ಯೆಗಳು ಜೀವಂತ ಇವೆ, ಇವುಗಳನ್ನು ಪರಿಹರಿಸಬೇಕಾದ ತಾಲ್ಲೂಕು ಆಡಳಿತ ನಿರ್ಲಕ್ಷ್ಯ ಮಾಡುತ್ತಿದೆ. ಇವರಿಗೆ ತಕ್ಷಣ ಸೌಲಭ್ಯ ಕಲ್ಪಿಸದಿದ್ದರೆ, ಮುಂದಿನ ದಿನಗಳಲ್ಲಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ಸಂತೋಷ ಎಚ್ಚರಿಕೆ ನೀಡಿದರು.

ಸಮಸ್ಯೆ ಆಲಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಅವರು, 15 ದಿನದ ಒಳಗಾಗಿ ಸಮಸ್ಯೆ ಇರುವ ಸ್ಥಳಕ್ಕೆ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ಸಂತೋಷ, ತಾಲ್ಲೂಕು ಕಾರ್ಯದರ್ಶಿ ರಮೇಶ ನಾಯ್ಕ, ಸಹ ಕಾರ್ಯದರ್ಶಿ ಬಳಿಗನೂರು ಕೊಟ್ರೇಶ್,  ಗುಡಿಹಳ್ಳಿ ಹಾಲೇಶ್, ಬಿ.ಭಾಗ್ಯ, ಎಚ್.ನೀಲಮ್ಮ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.