Home ಹರಪನಹಳ್ಳಿ : ಪಟಾಕಿ ಸಿಡಿಸಿ ಸಂಭ್ರಮಾಚರಣೆ
Homeರಾಜಕೀಯ

ಹರಪನಹಳ್ಳಿ : ಪಟಾಕಿ ಸಿಡಿಸಿ ಸಂಭ್ರಮಾಚರಣೆ

Share
dk . shivukumar
Share

ಹರಪನಹಳ್ಳಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ, ಇತ್ತ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಡಗರ, ಸಂಭ್ರಮ ಮುಗಿಲು ಮುಟ್ಟಿತ್ತು.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 14 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಎಲ್.ಇ.ಡಿ‌ ಪರದೆ ಅಳವಡಿಸಲಾಗಿತ್ತು.

ನೂತನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನೆರೆದಿದ್ದ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಜಯಘೋಷ ಕೂಗಿ, ಪಟಾಕಿ ಸಿಡಿಸಿ,  ಸಿಹಿ ಹಂಚಿ ಸಂಭ್ರಮಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉದಯಶಂಕರ್, ಪ್ರಮುಖ ಮುಖಂಡರಾದ ಮತ್ತೂರು ಬಸವರಾಜ್, ನಿಟ್ಟೂರು ಹನುಮಂತಪ್ಪ, ಶಶಿಧರ ನಾಯ್ಕ ಇದ್ದರು.
ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಸರ್ಕಾರದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮತ್ತಷ್ಟು ಪ್ರಗತಿಯಾಗಲಿ ಎಂದು ಮುಖಂಡರು ಆಶಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.