Home ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇರಲಿ : ಜಾಗೃತಿ
Homeಆರೋಗ್ಯ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇರಲಿ : ಜಾಗೃತಿ

Share
darmasthala
Share

ಹರಪನಹಳ್ಳಿ : ಇಲ್ಲಿಯ ಹರಿಪುರ ಯೋಜನಾ ಕಚೇರಿ ವ್ಯಾಪ್ತಿಯ ತಾಲ್ಲೂಕಿನ ದೇವರ ತಿಮ್ಮಾಪುರ ಗ್ರಾಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಜನಜಾಗೃತಿ ಮೂಡಿಸುವ ಬೀದಿ ನಾಟಕ ಜರುಗಿತು.
ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನ ಪೂಜಾರಿ ಮಾತನಾಡಿ, ಗ್ರಾಮಾಭಿವೃದ್ದಿ ಯೋಜನೆಯು ದುಶ್ಚಟ ಮುಕ್ತ ಸಮಾಜ ನಿರ್ಮಾಣ, ಶುದ್ಧ ಕುಡಿಯುವ ನೀರು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.

ಕ್ಷೇತ್ರ ಯೋಜನಾಧಿಕಾರಿ ಗಣಪತಿ ಭಟ್ ಮಾತನಾಡಿ, ಸಂಸ್ಥೆಯು ನೀಡುವ ಸೌಲಭ್ಯಗಳು ಮತ್ತು ಹಮ್ಮಿಕೊಳ್ಳುವ ಇಂತಹ ಜಾಗೃತಿ ಶಿಬಿರಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮುಖಂಡರಾದ  ರಾಮಣ್ಣ, ವೀರಾಚಾರಿ, ಭರ್ಮಪ್ಪ, ನಾಗರಾಜ್, ಬಸವರಾಜ್, ಎಂ.ಡಿ. ತಿಮ್ಮಣ್ಣ, ಮರಕುಂಟಿ ಬಸಣ್ಣ ಹಾಗೂ ಒಕ್ಕೂಟದ ಅಧ್ಯಕ್ಷೆ ರೇಣುಕಾ,  ಜ್ಞಾನವಿಕಾಸ ಸಮನ್ವಯಾಧಿಕಾರಿ ಅನಿತಾ,  ಸೇವಾ ಪ್ರತಿನಿಧಿ ಸುನಿತಾ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.