Home ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

Share
Share

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಬಿ.ವಿ.ಗಿರೀಶ್‌ ಬಾಬು ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಶೇ. 60ಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ. ರೈತರು ಬಿತ್ತನೆ ಮಾಡಿದ ಬೀಜ, ಗೊಬ್ಬರದ ಖರ್ಚನ್ನೂ ಪಡೆಯಲಾಗದೆ ದಿಕ್ಕು ತೋಚದಂತಾಗಿದ್ದಾರೆ. ಜಾನುವಾರುಗಳಿಗೆ ಮೇವು, ನೀರಿಗೂ ತತ್ವಾರ ಉಂಟಾಗಿದೆ. ಸರ್ಕಾರ ಶೀಘ್ರ ಬರಗಾಲ ಘೋಷಿಸಬೇಕು ಎಂದು ಆಗ್ರಹಿಸಿದರು.

ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಮಹೇಶ್ವರಯ್ಯ, ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ರೈತರ ನೆರವಿಗೆ ಬರಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಮುಖಂಡರಾದ ಗುಂಡಿ ಮಂಜಪ್ಪ, ಪಿ.ಶಿವಶಂಕರ ಗೌಡ, ಕೆ.ಬಸವರಾಜ, ಮಾರುತಿ, ಬಿ.ಮಂಜಪ್ಪ, ಶಿವಪ್ರಸಾದ ಬಣಕಾರ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.