Home ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Share
Share

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಿಂಪೀರ್ ತಂದೆ ಇಮಾಮಸಾಬ್ ಮೂಲಿಮನಿ (63) ಬಂಧಿತ ಆರೋಪಿ. 2024 ರಲ್ಲಿ ನಕಲಿ ದಾಖಲೆ ಪತ್ರ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಸಿಕೊಂಡು ಪರಾಗಿಯಾಗಿದ್ದ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಗುನ್ನೆ ನಂಬರ್ 237/2014  ದೂರು ದಾಖಲಾಗಿತ್ತು.

ಕೆಲಸದ ನಿಮಿತ್ತ ಹರಪನಹಳ್ಳಿಗೆ ಆಗಮಿಸಿದ್ದಾಗ ಠಾಣೆ ಸಿಬ್ಬಂದಿ ಎಚ್‍.ಸಿ. ಶಂಭುನಾಥ್ ಮತ್ತು  ಕಾನ್ಸಟೇಬಲ್ ಕೊಟ್ರೇಶ್ ಅವರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.