Home  ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  
Homeಅಪರಾಧ

 ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  

Share
ravi
Share

ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಲಬೂರು ರವಿ (55) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತರಾಗಿದ್ದಾರೆ. ಈ ಕುರಿತು ಅವರ ಪುತ್ರ ಅಲಬೂರು ನವೀನ್ ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತ ರವಿ ಅವರು ಸರ್ವೆ ನಂ: 204/A3C1 ರಲ್ಲಿನ 3-20 ಎಕರೆ ಭೂಮಿಯಲ್ಲಿ ಸುಗಂಧರಾಜ, ಸೇವಂತಿಗೆ ಸೇರಿದಂತೆ ವಿವಿಧ ಹೂವಿನ ಬೆಳೆಗಳನ್ನು ಬೆಳೆಯುತ್ತಿದ್ದರು. ತಮ್ಮ ಮೂವರು ಹೆಣ್ಣು ಮಕ್ಕಳ ಮದುವೆ ಹಾಗೂ ಕೃಷಿ ವೆಚ್ಚಗಳಿಗಾಗಿ ಬ್ಯಾಂಕ್ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಈ ವರ್ಷ ಜಮೀನಿನ ಪಂಪ್‌ಸೆಟ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ, ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಾರದೆ ತೀವ್ರ ನಷ್ಟ ಅನುಭವಿಸಿದ್ದರು. ಇದರಿಂದಾಗಿ ಕಳೆದ ಕೆಲವು ದಿನಗಳಿಂದ ತೀವ್ರ ಮನನೊಂದಿದ್ದರು. ಮೇ.18ರ ರಾತ್ರಿ ತಮ್ಮ ಜಮೀನಿಗೆ ತೆರಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪುತ್ರ ನವೀನ್ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ವಿವರ : ಮೇ 18ರಂದು ಹರಪನಹಳ್ಳಿಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ಮಗ ನವೀನ್ ಬಳಿ ಖರ್ಚಿಗೆಂದು 100 ರೂ. ಪಡೆದುಕೊಂಡು ಹೋಗಿದ್ದ ರವಿ ಅವರು ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.

ಇಂದು (ಮೇ 19) ಮುಂಜಾನೆ ಮಗ ನವೀನ್ ಹಾಗೂ ಚಿಕ್ಕಪ್ಪ ಆನಂದ್ ಜಮೀನಿನ ಬಳಿ ಹೋಗಿ ನೋಡಿದಾಗ, ತೋಟದ ಮರವೊಂದಕ್ಕೆ ಡ್ರಿಪ್ ಪೈಪ್‌ನಿಂದ ನೇಣು ಬಿಗಿದುಕೊಂಡು ರವಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೇ 18ರ ರಾತ್ರಿ 10 ಗಂಟೆಯ ನಂತರ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.