Home 400 ಕೆವಿ ವಿದ್ಯುತ್ ಗೋಪುರ ನಿರ್ಮಾಣಕ್ಕೆ ರೈತರ ತೀವ್ರ ವಿರೋಧ 
Homeಕೃಷಿ

400 ಕೆವಿ ವಿದ್ಯುತ್ ಗೋಪುರ ನಿರ್ಮಾಣಕ್ಕೆ ರೈತರ ತೀವ್ರ ವಿರೋಧ 

Share
myduru formers
Share

ಹರಪನಹಳ್ಳಿ: ಜಮೀನುಗಳಲ್ಲಿ 400 ಕೆವಿ ವಿದ್ಯುತ್ ಟವರ್ (ಗೋಪುರ) ನಿರ್ಮಿಸುವ ಸರ್ಕಾರದ ಯೋಜನೆಗೆ ಹರಪನಹಳ್ಳಿ ಹಾಗೂ ಹಡಗಲಿ ಭಾಗದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಂಡರು. ಭೂಮಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ರೈತರ ಜೀವನ ಈ ಯೋಜನೆಯಿಂದ ದುಸ್ತರವಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮೈದೂರು ಗ್ರಾಮದ ರೈತ ಶ್ರೀನಿವಾಸ ಗೌಡ ಮಾತನಾಡಿ, “ಹೊಲಗಳಲ್ಲಿ ಹೈ-ಟೆನ್ಷನ್ ವಿದ್ಯುತ್ ಲೈನ್‌ಗಳು ಹಾದುಹೋಗುವುದರಿಂದ ವಿದ್ಯುತ್ ಗೋಪುರದ ಕೆಳಗೆ ಯಾವುದೇ ರೀತಿಯ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ,” ಎಂದು ಬೇಸರ ವ್ಯಕ್ತಪಡಿಸಿದರು. ಹೈ-ಲೈನ್ ಕೆಳಗೆ ಕೆಲಸ ಮಾಡಲು ತೀವ್ರ ಅಪಾಯ ಇರುವುದರಿಂದ ಜಮೀನುಗಳಿಗೆ ಬರಲು ಕೂಲಿ ಕಾರ್ಮಿಕರು ಹಿಂಜರಿಯುತ್ತಿದ್ದಾರೆ. ಇದು ದೈನಂದಿನ ಕೃಷಿ ಕೆಲಸಗಳ ಮೇಲೆ ಭಾರಿ ಹೊಡೆತ ನೀಡಿದೆ. ಆರಂಭದಲ್ಲಿ ರೈತರಿಗೆ ಹೆಚ್ಚಿನ ಪರಿಹಾರದ ಆಸೆ ತೋರಿಸಿ ಒಪ್ಪಿಸಿದ್ದ ಅಧಿಕಾರಿಗಳು, ಈಗ ಗೋಪುರ ಅಳವಡಿಸುವ ಸಮಯದಲ್ಲಿ ಮಾತು ಬದಲಿಸಿ ವಂಚಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಪ್ರಗತಿಪರ ರೈತ ಪ್ರದೀಪ ಮಾತನಾಡಿ, “ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಮ್ಮ 6 ಎಕರೆ ಜಮೀನಿನಲ್ಲಿ ಗೋಪುರ ನಿರ್ಮಿಸಲು ಮುಂದಾಗಿದ್ದಾರೆ. ಅಲ್ಲಿ ದೊಡ್ಡ ಮಟ್ಟದ ಕೃಷಿ ಹಾಗೂ ಉದ್ಯೋಗ ಸೃಷ್ಟಿಸುವ ಯೋಜನೆ ನಮ್ಮದಾಗಿತ್ತು. ಈಗ ಈ ಗೋಪುರದಿಂದ ನಮ್ಮ ಕನಸು ನುಚ್ಚುನೂರಾಗಿದೆ. ಸರ್ಕಾರ ನಮಗೆ ಶಾಶ್ವತ ಪರಿಹಾರ ನೀಡಬೇಕು ಇಲ್ಲವೇ ವಾರ್ಷಿಕ ಗೌರವಧನ ನೀಡಬೇಕು. ಇಲ್ಲದಿದ್ದರೆ ನಾವು ಕಾನೂನು ಹೋರಾಟ ಮಾಡುವುದು ಗ್ಯಾರಂಟಿ,” ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮೈದೂರು ಗ್ರಾಮದ ಚನ್ನಬಸವನಗೌಡ, ನಾಗರಾಜ್, ಕೆಂಚಪ್ಪ, ನಿಂಗಪ್ಪ, ತಳಕಲ್ಲು ಗ್ರಾಮದ ಎಂ. ಚನ್ನಬಸನಗೌಡ, ಕರೆಗೌಡ, ಶಿವಕುಮಾರ ಸೇರಿದಂತೆ ಉತ್ತಂಗಿ, ಬೇವೂರು ಮತ್ತು ಇಟ್ಟಗಿ ಗ್ರಾಮದ ಹಲವು ರೈತರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.