Home ಹರಪನಹಳ್ಳಿ : ಫಾತೀಮಾ ಶೇಕ್ ಜಯಂತಿ ಆಚರಣೆ
Homeಸುದ್ದಿಗಳು

ಹರಪನಹಳ್ಳಿ : ಫಾತೀಮಾ ಶೇಕ್ ಜಯಂತಿ ಆಚರಣೆ

Share
fatima teacher harapanahalli
Share

ಹರಪನಹಳ್ಳಿ : ಮುಸ್ಲೀಂ ಧರ್ಮಿಯರ ಮೊದಲ ಶಿಕ್ಷಕಿ ಫಾತೀಮಾ ಶೇಕ್ ಅವರ ಜನ್ಮ ದಿನವನ್ನು ಹರಪನಹಳ್ಳಿ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಆಚರಿಸಲಾಯಿತು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ   ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹರಪನಹಳ್ಳಿ ಅವರ ಸಹಯೋಗದಲ್ಲಿ ಆಚರಿಸಿದ ಫಾತೀಮಾ ಶೇಕ್ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯ ಸರ್ಕಾರಿ ಮುಸ್ಲೀಂ ನೌಕರರ ಕ್ಷೇಮಾಭಿವೃದ್ದಿ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಮಕರಬ್ಬಿ ಶರೀಫ್ ಮಾತನಾಡಿ,  ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಮತ್ತು ಸಮಾಜ ಸುಧಾರಕಿ, ಸಾವಿತ್ರಿಬಾಯಿ ಫುಲೆ ಅವರೊಂದಿಗೆ 1848ರಲ್ಲಿ ದೇಶದ ಮೊದಲ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು. ಶಿಕ್ಷಣದ ಮೂಲಕ ಜಾತಿ ಮತ್ತು ಲಿಂಗ ತಾರತಮ್ಯ ನಿವಾರಣೆಗೆ ಶ್ರಮಿಸಿದ್ದಾರೆ. ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಶಿಕ್ಷಣ ಒದಗಿಸಿ ಭಾರತದಲ್ಲಿ ಮಹಿಳಾ ಶಿಕ್ಷಣಕ್ಕೆ ದಾರಿ ಮಾಡಿಕೊಟ್ಟರು. ಅವರ ಕೊಡುಗೆಗಳು ಭಾರತದ ಮಹಿಳಾ ಮತ್ತು ಶಿಕ್ಷಣ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಜಿ. ಮನೋಹರ ಮಾತನಾಡಿ, ಜಾತಿ ಮತ್ತು ಸಾಮಾಜಿಕ ಅಸಮಾನತೆ ವಿರುದ್ದ ಹೋರಾಡಿದರು. ಸಮಾಜದ ಹಿಂದುಳಿದ ವರ್ಗದ ಮಹಿಳೆಯರು ಮತ್ತು ಮಕ್ಕಳಿಗೆ ಶಿಕ್ಷಣದ ಒದಗಿಸಲು ಶ್ರಮಿಸಿದರು. ವಿಧವಾ ವಿವಾಹ, ಸತಿ ಸಹಗಮನ ಪದ್ಧತಿ ವಿರೋಧ ಮತ್ತು ಮಹಿಳಾ ಸಬಲೀಕರಣದಂತಹ ವಿಷಯಗಳ ಬಗ್ಗೆ ಧ್ವನಿ ಎತ್ತಿದರು. ದಲಿತ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಮಾನತೆಯ ಸಂಬಂಧಗಳನ್ನು ಬೆಳೆಸುವ ಮೂಲಕ ಜಾತ್ಯತೀತ ತತ್ವಗಳ ಜಾರಿಗೆ ಶ್ರಮಿಸಿದವರು ಫಾತೀಮಾ ಎಂದು ಸ್ಮರಿಸಿದರು.

ಮುಖ್ಯಶಿಕ್ಷಕ ಎಚ್.ಹುಸೇನ್ ಪೀರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಗುರುಮೂರ್ತಿ, ಸಹ ಕಾರ್ಯದರ್ಶಿ ವೀರಪ್ಪ,  ಮಕ್ಬುಲ್ ಭಾಷ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಟಿಎಚ್‍ಎಂ ಲತಾ, ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಅಂಜಿನಪ್ಪ, ಸಹ ಕಾರ್ಯದರ್ಶಿ ಎಂ.ಮರಿಯಪ್ಪ, ಬಡ್ತಿ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಪಿ.ಸುಬ್ಬಣ್ಣ,  ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎಂ.ಆಂಜನೇಯ, ಶೋಭಾಕುಮಾರಿ, ಜಮಾಲುದ್ದಿನ್, ಹುಸೇನ್ ಭಾಷ, ಎಂ.ಯಾಹ್ಯಾ, ಎನ್.ಇಸ್ಮಾಯಿಲ್ ಸಾಹೇಬ್, ರಿಜ್ವಾನ್ ಸಾಹೇಬ್, ಪೀರ್ ಸಾಹೇಬ್, ಜಿ.ಕರಿಬಸಪ್ಪ, ರಾಹತ್, ಮುಮ್ತಾಜ್ ಬೇಗಂ, ಅಸ್ಮಾ, ಸಾಹೇರಾ, ಸಿರಿನ್, ಟಿ.ಎಚ್‍.ಎಂ.ಉಮಾ ಹಾಗೂ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.