Home ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ
Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

Share
Share

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ.

ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ ಬೇಟಿಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು. ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ಮೃತಪಟ್ಟಿದ್ದ ಖಲೀಲ್‌ ಅವರ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಠಾಣೆಯ ತಪ್ಪಿತಸ್ಥ ಅಧಿಕಾರಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಲಾಕಡೆತ್‌ ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಕ್ರಮ ಜರುಗಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಸಂತೋಷ ಗುಳೇದಹಟ್ಟಿ ಎಚ್ಚರಿಕೆ ನೀಡಿದರು.

ಸಿಪಿಐ(ಎಂಎಲ್) ಜಿಲ್ಲಾ ಕಾರ್ಯದರ್ಶಿ ಸಂದೇರ ಪರಶುರಾಮ್, ಮುಖಂಡರಾದ ಗುಳೇದಹಟ್ಟಿ, ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘದ  ಕಾರ್ಯದರ್ಶಿ ಬಾಬು ಬಿ., ಆಸಿಫ್ ಕೆ. ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.