Home ಅಪರಾಧ ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ
ಅಪರಾಧ

ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ

Share
crime harapanahalli
Share

ಹರಪನಹಳ್ಳಿ : ನಗರದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ನಿವಾಸದ ಎದುರಿನ ಮನೆಯಲ್ಲೇ ಕಳ್ಳರು ಕೈಚಳಕ ತೋರಿಸಿದ್ದು, ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ.

ಇಲ್ಲಿನ ನಿವಾಸಿ ಹರಾಳು ಸಿದ್ದೇಶ ಎಂಬುವವರ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಅಲ್ಮೇರಾದಲ್ಲಿ ಇರಿಸಲಾಗಿದ್ದ 11 ತೊಲ ಚಿನ್ನದ ಆಭರಣ ಹಾಗೂ ವ್ಯಾಪಾರ ವಹಿವಾಟಿನಿಂದ ಸಂಗ್ರಹವಾಗಿದ್ದ ₹80 ಸಾವಿರ ನಗದನ್ನು ಅಪಹರಿಸಿ ಪರಾರಿಯಾಗಿದ್ದಾರೆ.

ಮೊದಲು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರ ಮನೆ ಕಾಂಪೌಂಡ್ ಹಾರಿ ಒಳಬಂದ ಮುಸುಕುಧಾರಿಗಳು, ಶಾಸಕರ ಕಟ್ಟಡದ ಮೇಲ್ಭಾಗದ ಮನೆಯ ಅಂಗಳದಲ್ಲಿ ಹುಡುಕಾಟ ನಡೆಸಿದ್ದಾರೆ. ಬಳಿಕ ಆವರಣದ ಗೇಟು ಮೂಲಕ ಹೊರಬಂದು ಹರಾಳು ಸಿದ್ದೇಶ ಅವರ ಮನೆಯತ್ತ ನಿಶ್ಯಬ್ಧವಾಗಿ ತೆರಳಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಘಟನೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಂತೋಷ ಚೌವ್ಹಾಣ್, ಸಿಪಿಐ ಮಹಾಂತೇಶ ಸಜ್ಜನ್ ಹಾಗೂ ಅಪರಾಧ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಅಕ್ಕಪಕ್ಕದ ಮನೆಗಳ ಸಿಸಿಟಿವಿ ಫೂಟೇಜ್‌ಗಳನ್ನು ಸಂಗ್ರಹಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಸಂಜೆ ತನಕ ಪ್ರಕರಣ ದಾಖಲಾಗಿರಲಿಲ್ಲ.

2025ರ ಜುಲೈ 16ರಂದು ಇದೆ ಬಡಾವಣೆಯ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಕಚೇರಿ ಕಳ್ಳತನವಾಗಿತ್ತು. ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದರು.

‘ನನ್ನ ನಿವಾಸದ ಮುಂಭಾಗದಲ್ಲೇ ಕಳ್ಳತನ ನಡೆದಿರುವುದು ಆತಂಕದ ವಿಷಯ. ಶೀಘ್ರವೇ ಕಳ್ಳರನ್ನು ಪತ್ತೆಹಚ್ಚಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು,’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ...

ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ...

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.