Home ಹರಪನಹಳ್ಳಿ: ಯೋಗ-ಪ್ರಾಣಾಯಾಮ, ಧ್ಯಾನ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿ
Homeಶಿಕ್ಷಣ

ಹರಪನಹಳ್ಳಿ: ಯೋಗ-ಪ್ರಾಣಾಯಾಮ, ಧ್ಯಾನ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿ

Share
Share

ಹರಪನಹಳ್ಳಿ:  ಪ್ರಾಣಾಯಾಮವು ಉಸಿರಾಟವನ್ನು ನಿಯಂತ್ರಿಸುವುದರ ಜೊತೆಗೆ ದೇಹಕ್ಕೆ ಚೈತನ್ಯ ನೀಡುತ್ತದೆ. ಯೋಗವು ದೇಹ ಮತ್ತು ಮನಸ್ಸಿಗೆ ಸಮತೋಲನ ತರುತ್ತದೆ. ಧ್ಯಾನವು ವಿದ್ಯಾರ್ಥಿಗಳ ಏಕಾಗ್ರತೆ, ಜ್ಞಾನಾರ್ಜನೆ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಅತ್ಯಂತ ಸಹಕಾರಿಯಾಗಿದೆ ಎಂದು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯ ಮುಖ್ಯ ಶಿಕ್ಷಕರಾದ ಅರ್ಜುನ್ ಪರಸಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಆಯೋಜಿಸಿದ್ದ 15ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಪ್ರತಿನಿತ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ವ್ಯಾಯಾಮ ಮಾಡಿಸಲಾಗುತ್ತಿದ್ದು, ಆರೋಗ್ಯಕರ ಜೀವನಶೈಲಿಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು. ಎಲ್‌ಐಸಿಯ ಮುಖ್ಯ ಜೀವ ವಿಮಾ ಸಲಹೆಗಾರ ಮತ್ತು ಜೀವಜಲ ಟ್ರಸ್ಟ್ ಅಧ್ಯಕ್ಷರಾದ ಹೇಮಣ್ಣ ಮೋರಿಗೇರಿ ಮಾತನಾಡಿ, ನಿತ್ಯ ನಿಯಮಿತವಾಗಿ ವ್ಯಾಯಾಮ, ಪ್ರಾಣಾಯಾಮ, ಯೋಗ ಹಾಗೂ ಧ್ಯಾನವನ್ನು ಅಳವಡಿಸಿಕೊಳ್ಳುವುದರಿಂದ ಅನಾರೋಗ್ಯದಿಂದ ದೂರವಿದ್ದು ಆರೋಗ್ಯವಂತ ಜೀವನವನ್ನು ನಡೆಸಬಹುದು ಎಂದರು.

ಯೋಗವನ್ನು ವಿಶ್ವದಾದ್ಯಂತ ಪರಿಚಯಿಸಿ ಪ್ರಚುರಪಡಿಸಿದ ಹೆಮ್ಮೆ ಭಾರತಕ್ಕೆ ಸಲ್ಲುತ್ತದೆ. ಇಂದು ಸುಮಾರು 190 ದೇಶಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಏಕಕಾಲದಲ್ಲಿ ಆಚರಿಸಲಾಗುತ್ತಿದೆ. ವ್ಯಾಯಾಮ, ಪ್ರಾಣಾಯಾಮ, ಯೋಗ ಹಾಗೂ ಧ್ಯಾನದ ಮಹತ್ವವನ್ನು ಕೇವಲ ಕೇಳುವುದರಿಂದ ಸಾಲದು; ಅವುಗಳನ್ನು ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವುಗಳ ನೈಜ ಪ್ರಯೋಜನವನ್ನು ಅನುಭವಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾದ ಸುರೇಶ್, ಪತಂಜಲಿ ಯೋಗ ಶಿಕ್ಷಕರಾದ ಬಿ. ಸುದರ್ಶನ್ ಹಾಗೂ ಹೇಮಣ್ಣ ಮೋರಿಗೇರಿ ಅವರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಿಕ್ಷಕರಾದ ಸಿ. ಗಂಗಾಧರ, ಮಹಾಲಿಂಗ ಗಾವಡೆ, ಎಂ. ರೇಣುಕಮ್ಮ, ಗೀತಾಬಾಯಿ,ಉಮಾದೇವಿ,ಆಶಾ ಮತ್ತು ವಿದ್ಯಾರ್ಥಿಗಳು ಉತ್ಸುಕತೆಯಿಂದ ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.