Home ಕೃಷಿ ಪಕ್ಷಿಗಳಿಗೆ ನೀರುಣಿಸುವ ಕಾಯಕ ಮಾದರಿ : ಕೋಡಿಹಳ್ಳಿ ಭೀಮಪ್ಪ
ಕೃಷಿ

ಪಕ್ಷಿಗಳಿಗೆ ನೀರುಣಿಸುವ ಕಾಯಕ ಮಾದರಿ : ಕೋಡಿಹಳ್ಳಿ ಭೀಮಪ್ಪ

Share
kodihalli bheemanna
Share

ಹರಪನಹಳ್ಳಿ: ಜೆಸಿಐ ಸಂಸ್ಥೆಯು ಮರಗಿಡಗಳಲ್ಲಿ ಮಡಿಕೆಗಳನ್ನು ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ಅತ್ಯಂತ ಮಾದರಿಯಾಗಿದೆ. ಇಂತಹ ಕಾರ್ಯಗಳ ಮೂಲಕ ಪಕ್ಷಿ ಸಂಕುಲವನ್ನು ಸಂರಕ್ಷಿಸಿದರೆ ಮಾತ್ರ ಪರಿಸರ ಉಳಿಯಲು ಮತ್ತು ಸಮೃದ್ಧಗೊಳ್ಳಲು ಸಾಧ್ಯ ಎಂದು ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಪ್ಪ ತಿಳಿಸಿದರು.

ನಗರದ ಸಮತಾ ಉದ್ಯಾನವನದಲ್ಲಿ ಶನಿವಾರ ಜ್ಯೂನಿಯರ್ ಚೇಂಬರ್ ಇಂಟರನ್ಯಾಷನಲ್ ಅಲುಮ್ನಿ ಕ್ಲಬ್ (ಜೆಎಸಿ) ಆಯೋಜಿಸಿದ್ದ ‘ಪಕ್ಷಿಗಳಿಗೆ ನೀರು ಕಲ್ಪಿಸುವ ಮಡಿಕೆ ಅಳವಡಿಸುವ ಅಭಿಯಾನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೇಸಿಗೆ ಮುಗಿಯುವ ತನಕ ಮಡಿಕೆಗಳಲ್ಲಿ ನೀರಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಲು ಅವರು ಸಲಹೆ ನೀಡಿದರು.

ಜೆಎಸಿ ತಾಲ್ಲೂಕು ಅಧ್ಯಕ್ಷ ಎಚ್.ಮಲ್ಲಿಕಾರ್ಜುನ ಮಾತನಾಡಿ, “ಒಂದು ಪಾತ್ರೆ ನೀರು – ನೂರಾರು ಪಕ್ಷಿಗಳಿಗೆ ನೆರವು” ಎಂಬ ಘೋಷಣೆಯೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮುಂದಿನ 10 ದಿನಗಳ ಕಾಲ ಈ ಅಭಿಯಾನ ನಡೆಯಲಿದ್ದು, ಸಾರ್ವಜನಿಕರು ತಮ್ಮ ಮನೆಯ ಛಾವಣಿ ಅಥವಾ ಸುತ್ತಮುತ್ತಲಿನ ಮರಗಳಲ್ಲಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅತ್ಯುತ್ತಮ ಪಕ್ಷಿ ಪ್ರೇಮಿಗಳಿಗೆ ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.

ಕಾರ್ಯಕ್ರಮದಲ್ಲಿ ಬಿ.ಎಸ್.ರವಿಶಂಕರ, ವಲಯ ಮಂಡಳಿ ಸಂಸತ್ ಸದಸ್ಯ ವಿಶ್ವನಾಥ, ಪ್ರಸನ್ನಕುಮಾರ ಜೈನ್, ರವೀಂದ್ರ ಅಧಿಕಾರ, ಇರ್ಷಾದ್ ಭಾಷ, ಪ್ರಭಾಕರ ಕನ್ನಿಹಳ್ಳಿ, ಶಿವಕುಮಾರ, ಹುಲಿರಾಜ್ ಮತ್ತಿತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ....

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ...

ಮೀನು ಗಾರಿಕೆ ಇಲಾಖೆ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.