Home ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ
Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

Share
Share

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕಡತಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹರಿಹರ ಆಸರೆ ಮಹಿಳಾ ಗ್ರಾಮೀಣಾಭಿವೃದ್ಧಿ ಸಂಸ್ಥೆ  ಹಾಗೂ ಜೀವನದಿ ಸಂಜೀವಿನಿ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಕರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು, ಬದಲಾಗಿ ಇಲಾಖೆಯ ಯೋಜನೆಗಳ ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷಚೇತನ ಮಕ್ಕಳ ಶೀಘ್ರ ಪತ್ತೆಹಚ್ಚುವಿಕೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಪೋಷಕರಿಗೆ ಸವಿಸ್ತಾರವಾಗಿ ಮಾಹಿತಿ ನೀಡಲಾಯಿತು. ಅರ್ಹ ಅಂಗವಿಕಲ  ಮಕ್ಕಳಿಗೆ ಉಚಿತ ಶಾಲಾ ಕಿಟ್‌ಗಳನ್ನು ವಿತರಿಸಿ, ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ತುಂಬಲಾಯಿತು.

ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಎಚ್.ಬೋಜಪ್ಪ, ಕಾರ್ಯದರ್ಶಿ ನಾಗರಾಜ್, ಎಂ.ಆರ್.ಡಬ್ಲ್ಯು ಧನರಾಜು,ವಿ.ಆರ್.ಡಬ್ಲ್ಯೂ. ಗೀತಾ, ಅಲಗಿಲವಾಡ ಯೋಗೀಶ್, ಮಹಾಂತೇಶ್ ಪಾಟೀಲ್, ಸುನಿತಾ, ಪ್ರೇಮಾ ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.