Home ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆಯಿಂದ ತಹಶೀಲ್ದಾರ್ ಗೆ ಮನವಿ 
Homeಸುದ್ದಿಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆಯಿಂದ ತಹಶೀಲ್ದಾರ್ ಗೆ ಮನವಿ 

Share
Share

ಹರಪನಹಳ್ಳಿ: ಕನ್ನಡಿಗರ ಹಿತಾಸಕ್ತಿ ಹಾಗೂ ರಾಜ್ಯದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾಧ್ಯಕ್ಷೆ ಜಿ.ಈರಮ್ಮ ಮಾತನಾಡಿ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಯಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಹಾಗೂ ಮೇಕೆದಾಟು ಯೋಜನೆಯನ್ನು ಶೀಘ್ರ ಆರಂಭಿಸಬೇಕು, ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕು, ಎಂಇಎಸ್‌ ವಿರುದ್ಧ ಕಠಿಣ ಕ್ರಮ ಕೈಗೊಂಡು ಅದನ್ನು ನಿಷೇಧಿಸಬೇಕು, ಎಂದು ಆಗ್ರಹಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಅವುಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸಿ ಉಳಿಸಬೇಕು, ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಅಕ್ರಮ ವಲಸಿಗರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಚಿರಂಜೀವಿ ಕೋಸಂಬಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಗಂಗಮ್ಮ ಹಿರೇಮಠ, ಭೋವಿ ನಾಗಮ್ಮ, ನಿರ್ಮಲಮ್ಮ ಸೇರಿದಂತೆ ಇತರರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.