Home ಒಳಮೀಸಲಾತಿಗೆ ಆಗ್ರಹಿಸಿ ಕಣಿವಿಹಳ್ಳಿ ಮಂಜುನಾಥ ನೇತೃತ್ವದಲ್ಲಿ ಪ್ರತಿಭಟನೆ
Homeಸುದ್ದಿಗಳು

ಒಳಮೀಸಲಾತಿಗೆ ಆಗ್ರಹಿಸಿ ಕಣಿವಿಹಳ್ಳಿ ಮಂಜುನಾಥ ನೇತೃತ್ವದಲ್ಲಿ ಪ್ರತಿಭಟನೆ

Share
Share

ಹರಪನಹಳ್ಳಿ: ರಾಜ್ಯದಲ್ಲಿ ಮಾದಿಗ ಸಮಾಜಕ್ಕೆ ಒಳಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹರಪನಹಳ್ಳಿ ತಾಲ್ಲೂಕಿನ ಮಾದಿಗ ಸಮಾಜದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಾದಿಗ ಸಮಾಜದ‌ ಹಿರಿಯ ಮುಖಂಡ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, “ಮಾದಿಗ ಸಮಾಜದ ಮೂರು ದಶಕಗಳ ಹೋರಾಟದ ಫಲವಾಗಿ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಸುಪ್ರೀಂ ಕೋರ್ಟ್ ಮೂಲಕ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ಕೊಡಿಸಿತು. ಆದರೆ, ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಿಂದ ಈ ಪ್ರಕ್ರಿಯೆ ಜಾರಿಗೆ ವಿಳಂಬ ಮಾಡುತ್ತಿದೆ,” ಎಂದು ಆರೋಪಿಸಿದರು.

ಸಚಿವರಾದ ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ಜಿ. ಪರಮೇಶ್ವರ್ ಅವರು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಒಳಮೀಸಲಾತಿ ಹೋರಾಟದ ಕುತ್ತಿಗೆಗೆ ನೇಣು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಮತ್ತು ನಾಗಮೋಹನ ದಾಸ್ ಆಯೋಗದ ವರದಿಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಶೇ 17ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ ಶೇ 15ಕ್ಕೆ ಇಳಿಸಿರುವುದನ್ನು ಕೈಬಿಡಬೇಕು. ಒಳಮೀಸಲಾತಿ ಅನ್ವಯವೇ ಬಾಕಿ ಇರುವ 56,000 ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಹುಲಿಕಟ್ಟೆ ಪಕ್ಕೀರಪ್ಪ, ಸುನೀಲ್ ಕುಮಾರ, ಎಂ.ಎಸ್.ಪಿ.ಪಕ್ಕೀರಪ್ಪ, ರಾಜ, ಸುರೇಶ, ಪಿ‌.ಕೋಟೆಪ್ಪ, ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.