ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದೇನೆ ಎಂದು ದಿ.ಎಂ.ಪಿ.ಪ್ರಕಾಶ್ ಪುತ್ರಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಚಿವ ಸ್ಥಾನದ ಆಕಾಂಕ್ಷಿ ಇದ್ದೇನೆ ಎಂದು ಹೇಳಿಲ್ಲ, ಬೇಕು ಎಂದು ಪಟ್ಟು ಹಿಡಿದಿಲ್ಲ.
ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ್ ಅವರ ಬಳಿ ಮನವಿ ಮಾಡಿರುವೆ ಅಷ್ಟೇ, ಸಚಿವ ಸ್ಥಾನ ಬೇಕು. ಹೈಕಮಾಂಡ್ ಸಚಿವ ಸ್ಥಾನ ಕಲ್ಪಿಸಿದರೆ, ಸಮರ್ಥವಾಗಿ ನಿಭಾಯಿಸುತ್ತೇನೆ. ಯಾರಿಗೆ ಕೊಟ್ಟರೂ ನಾನು ಖುಷಿ ಪಡುತ್ತೇನೆ ಎಂದು ಹೇಳಿದರು.
Leave a comment