Home ಶಿಕ್ಷಣ ಹರಪನಹಳ್ಳಿ ಮುಸ್ಲಿಂ ನೌಕರರಿಂದ ವಿದ್ಯಾರ್ಥಿಗಳಿಗೆ ನೆರವು
ಶಿಕ್ಷಣಸುದ್ದಿಗಳು

ಹರಪನಹಳ್ಳಿ ಮುಸ್ಲಿಂ ನೌಕರರಿಂದ ವಿದ್ಯಾರ್ಥಿಗಳಿಗೆ ನೆರವು

Share
harapanahalli-muslim-employees-aid-to-students
Share

ಹರಪನಹಳ್ಳಿ: ‘ದಾನಧರ್ಮ ಮಾಡುವುದು ಇಸ್ಲಾಂ ಧರ್ಮದ ಪ್ರಮುಖ ತತ್ವಗಳಲ್ಲಿ ಒಂದಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಅರ್ಹರಿಗೆ ಸಹಾಯ ಮಾಡುವಲ್ಲಿ ನಾವು ಎಂದಿಗೂ ಹಿಂದೆ ಸರಿಯಬಾರದು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಷರೀಫ್ ಮಕರಬ್ಬಿ ಹೇಳಿದರು.

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಿಜಯನಗರ ಜಿಲ್ಲೆ ಹಾಗೂ ಹರಪನಹಳ್ಳಿ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಧನಸಹಾಯ ವಿತರಿಸಿ ಅವರು ಮಾತನಾಡಿದರು.

ಧರ್ಮಗುರುಗಳ ಹಿತವಚನದಂತೆ ಶಿಕ್ಷಣಕ್ಕಾಗಿ ಈ ಸಹಾಯ ಹಸ್ತ ಚಾಚಲಾಗಿದೆ. ನೆರವು ಪಡೆದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದ ಸತ್ಪ್ರಜೆಗಳಾಗಿ ಬೆಳೆಯಬೇಕು. ನಮ್ಮ ಸಂಘವು ನಿರಂತರವಾಗಿ ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣವನ್ನಷ್ಟೇ ಅಲ್ಲದೆ, ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಆಶಿಸಿದರು.

ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಎನ್. ಇಸ್ಮಾಯಿಲ್, ಗೌರವಾಧ್ಯಕ್ಷ ಎಸ್. ಶಫಿವುಲ್ಲಾ, ಕಾರ್ಯದರ್ಶಿ ಕೆ. ರಿಜ್ವಾನ್ ಸಾಹೇಬ್, ಉಪಾಧ್ಯಕ್ಷ ಯಾಹ್ಯ, ನಿರ್ದೇಶಕರುಗಳಾದ ಎಚ್. ಪೀರಾ ಸಾಹೇಬ್, ಎಂ. ದಾದಾಪೀರ್ ಮತ್ತಿತರರು ಪಾಲ್ಗೊಂಡಿದ್ದರು.

 

Share

1 Comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.