Home ಸುದ್ದಿಗಳು  ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ
ಸುದ್ದಿಗಳು

 ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ

Share
Share

ಹರಪನಹಳ್ಳಿ ಹೊಸ ಬಸ್‌ ನಿಲ್ದಾಣಕ್ಕೆ ಕಾಯ್ದಿರಿಸಿದ ಜಾಗ

ಹರಪನಹಳ್ಳಿ : ನ್ಯಾಯಾಲಯ ಆದೇಶ ದಿಕ್ಕರಿಸಿ ಸರ್ವೆ ನಂಬರ್‌ 539/ಬಿ1ಬಿ ವಿಸ್ತೀರ್ಣದಲ್ಲಿ 1 ಎಕರೆ 42 ಸೆಂಟ್ಸ್‌ ಭೂಮಿಯನ್ನು ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲು ಹೊರಟಿದ್ದಾರೆ ಎಂದು ಮುಸ್ಲಿಂ ಸಮಾಜದ ಮುಖಂಡರು ಆರೋಪಿಸಿದ್ದಾರೆ.

ಸರ್ಕಾರದಿಂದ ಪಟ್ಟಾ ಪಡೆದಿರುವ ಬೇಲ್ದಾರ್‌ ಲಕ್ಷ್ಮಯ್ಯ ಅವರು 1 ಎಕರೆ 42 ಸೆಂಟ್ಸ್‌ ಭೂಮಿ ಮಾರಾಟ ಮಾಡಿದ್ದು, ಇದೇ ಜಾಗವನ್ನು ಇಜಂತಕರ್‌ ಜಯಪ್ರಕಾಶ್‌ ಅವರು ಬೇರೆಯವರಿಗೆ ಮಾರಾಟ ಮಾಡಿದ್ದು, ಈಗ ಅಮಿನಾ ಮೊಹಮ್ಮದಿ ಅವರ ಹೆಸರಿನಲ್ಲಿದೆ. ಇದರ ಡೋರ್‌ ನಂಬರ್‌ 399/1817/ಎ26/ಎ ಪುರಸಭೆ ಕೊಟ್ಟಿದೆ. ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ತಡೆಯಾಜ್ಞೆ ಆದೇಶವಿದ್ದರೂ ಸಹ ಅಧಿಕಾರಿಗಳು ಯಾವುದೇ ನೊಟೀಸ್‌ ಜಾರಿಮಾಡದೇ ದೌರ್ಜನ್ಯದಿಂದ ಕಬಳಿಸುತ್ತಿದ್ದಾರೆ.

ಜನಗಳು ವಾಸವಿರುವ ಜಾಗದಲ್ಲಿ ಬಸ್‌ ನಿಲ್ದಾಣ ಕಟ್ಟಿಸಬಾರದು. ವಾಸವಿರುವ ಜನಗಳನ್ನು ಒಕ್ಕಲೆಬ್ಬಿಸಬಾರದು.  ಶಾಸಕರು ಮತ್ತು ಅಧಿಕಾರಿಗಳು ಪಟ್ಟಣಕ್ಕೆ ಹೊಂದಿಕೊಂಡಿರುವ ಜಾಗ ಖರೀದಿಸಿ ನೂತನ ಸರ್ಕಾರಿ ಬಸ್‌ ನಿಲ್ದಾಣ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾವುದು ಎಂದು ಅಂಜುಮನ್‌ ಸಮಿತಿ ಮಾಜಿ ಅಧ್ಯಕ್ಷ ಡಿ.ಮುಜಿಬರ್‌ ರೆಹಮಾನ್‌ , ಪುರಸಭೆ ಮಾಜಿ ಸದಸ್ಯ ಡಿ.ಜಹೂರು, ಇಜಂತಕರ್‌ ರಾಜು, ಕಲೀಮುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಪನಹಳ್ಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಮಾತನಾಡಿ, ‘ಕೋಟೆ ಕಾಳಮ್ಮ ದೇವಸ್ಥಾನದ ಬಳಿಯಿರುವ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಲಾಗಿದೆ. ಆ ಪ್ರದೇಶವನ್ನು ಯಾವುದೇ ಸಮಾಜಕ್ಕೆ ಕೊಟ್ಟಿಲ್ಲ. ಆ ಜಾಗವನ್ನು ಉಯೋಗಿಸಿಲ್ಲದ ಕಾರಣ, ಈಗ ಬೇರೊಂದು ಸಾರ್ವಜನಿಕ ಉದ್ದೇಶಕ್ಕೆ ಆ ಸ್ಥಳವನ್ನು ಕಾಯ್ದಿರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.