Home ನವ ವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
Homeಅಪರಾಧ

ನವ ವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Share
Share

ಹರಪನಹಳ್ಳಿ : ತಾಲ್ಲೂಕಿನ ಗುಳೇದಹಟ್ಟಿ ತಾಂಡದ ಮನೆಯಲ್ಲಿ ನವ ವಿವಾಹಿತೆಯ ಶವ ಪತ್ತೆಯಾಗಿದ್ದು, ಪೋಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೌಶಲ್ಯ (25) ಮೃತ ನವ ವಿವಾಹಿತೆ. ಯರಬಳ್ಳಿ ತಾಂಡದ ಕೌಶಲ್ಯ ಅವರನ್ನು  ಗುಳೇದಹಟ್ಟಿ ತಾಂಡದ ಶಿವಕುಮಾರ್ ನಾಯ್ಕ ಎಂಬುವವರೊಂದಿಗೆ ಮೂರು ತಿಂಗಳ ಹಿಂದಷ್ಟೇ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.

ಶಿವಕುಮಾರ್ ನಾಯ್ಕ ಬೆಂಗಳೂರು ಕೋಣನಕುಂಟೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದ್ದು, ಮದುವೆ ಬಳಿಕವೂ ಕೌಶಲ್ಯ ಅವರನ್ನು ಗುಳೇದಹಟ್ಟಿ ತಾಂಡದಲ್ಲಿಯೇ ಬಿಟ್ಟು ಹೋಗಿದ್ದರು. ಮೊನ್ನೆಯಷ್ಟೇ ಶಿವಕುಮಾರ್ ನಾಯ್ಕ ಸ್ವಗ್ರಾಮಕ್ಕೆ ಮರಳಿದ್ದರು. ಗಂಡ ಹೆಂಡತಿ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕೌಶಲ್ಯ ಪೋಷಕರು ಆರೋಪಿಸಿದ್ದಾರೆ.

ಮದುವೆಗೆ ವರದಕ್ಷಿಣೆಯಾಗಿ 18 ತೊಲ ಬಂಗಾರ, ಮೂರು ಲಕ್ಷ ಹಣವನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಆದರೂ ಇನ್ನು ವರದಕ್ಷಿಣೆಗೆ ದುಂಬಾಲು ಬಿದ್ದಿದ್ದ ಅವರು, ಮಗಳ ಶೀಲದ ಕುರಿತು ಶಂಕಿಸುತ್ತಿದ್ದರು.  ಇದೇ ಕಾರಣಕ್ಕೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಮೃತ ಕೌಶಲ್ಯ ಅವರ ತಾಯಿ ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಡಾ.ಸಂತೋಷ್ ಚೌಹಾಣ್, ವೃತ್ತ ನಿರೀಕ್ಷಕ ಮಹಾಂತೇಶ್ ಸಜ್ಜನ್, ಸಬ್ ಇನ್ಸ್ಪೆಕ್ಟರ್ ವಿಜಯ್ ಕೃಷ್ಣ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.