Home ಸುದ್ದಿಗಳು ಹರಪನಹಳ್ಳಿಯಲ್ಲಿ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ಸುದ್ದಿಗಳು

ಹರಪನಹಳ್ಳಿಯಲ್ಲಿ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ

Share
Harapanahalli-protest-aiks
Share

 ಹರಪನಹಳ್ಳಿ:  ತಾಲ್ಲೂಕಿನಲ್ಲಿ ಹೋಬಳಿಗೊಂದು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.  ಎಐಕೆಎಸ್ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ತಾಲ್ಲೂಕಿನಲ್ಲಿ 1,80,396 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. ಈ ಪೈಕಿ 40 ಸಾವಿರಕ್ಕೂ ಅಧಿಕ ರೈತರು ಈಗಾಗಲೇ ಬೆಳೆ  ಕಟಾವು ಮಾಡಿದ್ದು, ದಾಸ್ತಾನ ಮಾಡಿಟ್ಟುಕೊಳ್ಳಲು ಶಕ್ತಿ, ಅನುಕೂಲವಿಲ್ಲದಾಗಿದೆ ಎಂದರು.ಹಾಗಾಗಿ ತಾಲ್ಲೂಕಿನ ಹರಪನಹಳ್ಳಿ, ಚಿಗಟೇರಿ, ಅರಸೀಕೆರೆ ಹಾಗೂ ತೆಲಿಗಿ ಹೋಬಳಿಗೊಂಡು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳು : ಅತಿವೃಷ್ಟಿಯಿಂದ ಹಾನಿಯಾಗಿರುವ ಬೆಳೆಗಳಿಗೆ ಬೆಳೆಹಾನಿ ಪರಿಹಾರ ನೀಡಬೇಕು. ರೈತರ ಬೆಳೆ ಸಾಲ ಮನ್ನಾ ಮಾಡಬೇಕು. 16839 ರೈತರ ಬಗರ್ ಹುಕ್ಕುಂ ಸಮಸ್ಯೆ ಪರಿಹಾರ ಮಾಡಬೇಕು. ಹೊಸಕೋಟೆಯ ವಿವಿದೋದ್ದೇಶ ಕೃಷಿ ಪತ್ತಿನ ಸಹಕಾರ ಸಂಘದ ಠೇವಣಿದಾರರಿಗೆ ಹಣ ಕೊಡಿಸಬೇಕು, ವಂಚನೆ ಮಾಡಿದ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ಸಂತೋಷ್, ತಾಲ್ಲೂಕು ಕಾರ್ಯದರ್ಶಿ ರಮೇಶ್ ನಾಯ್ಕ, ಹರಿಯಮ್ಮನಹಳ್ಳಿಬಸವರಾಜ್, ಗರಿಗುಡಿಹಳ್ಳಿ ಶಿವರಾಮ್, ಹನುಮಂತನಾಯ್ಕ, ಡಿ.ಎಚ್.ಅರುಣ್, ಪ್ರಭುಗೌಡ, ಮತ್ತಿಹಳ್ಳಿ ತಿಂದಪ್ಪ, ಭರಮಪ್ಪ, ಎಚ್.ಹಾಲಪ್ಪ, ಎ.ಬಿ.ನಾಗರಾಜ ಗೌಡ, ವಿಶಾಲಾಕ್ಷಮ್ಮ, ಅರಸೀಕೆರೆ ರಂಗಪ್ಪ, ದುರುಗಪ್ಪ, ಎಂ.ಬಸವರಾಜ್, ಬೊಮ್ಮಲಿಂಗಪ್ಪ, ಮಾದಿಹಳ್ಳಿ ನಿಂಗಪ್ಪ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.