Home ಕೃಷಿ  ನೀಲಗುಂದ ಕ್ರಾಸ್ : ಧರೆಗುರುಳಿದ ಮರಗಳು
ಕೃಷಿಸುದ್ದಿಗಳು

 ನೀಲಗುಂದ ಕ್ರಾಸ್ : ಧರೆಗುರುಳಿದ ಮರಗಳು

Share
neelagunda cross
Share

ಹರಪನಹಳ್ಳಿ: ತಾಲ್ಲೂಕಿನಾದ್ಯಂತ ಗುರುವಾರ ಮಧ್ಯಾಹ್ನ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾದ ವರದಿಯಾಗಿದೆ.

ರಸ್ತೆ ತಡೆದ ಮರಗಳು: ಸಕಾಲಕ್ಕೆ ಸ್ಪಂದಿಸಿದ ಪೊಲೀಸ್

ಮಧ್ಯಾಹ್ನ 4:30ರ ಸುಮಾರಿಗೆ ಬೀಸಿದ ಭಾರಿ ಗಾಳಿಗೆ ನೀಲಗುಂದ ಕ್ರಾಸ್ ಬಳಿ ಎರಡು ಬೃಹತ್ ಮರದ ಕೊಂಬೆಗಳು ಮುರಿದು ಬಿದ್ದಿವೆ. ಇದರ ಪರಿಣಾಮವಾಗಿ ಪಕ್ಕದಲ್ಲಿದ್ದ ಎರಡು ವಿದ್ಯುತ್ ಕಂಬಗಳು ಜಖಂಗೊಂಡು, ತಂತಿಗಳು ರಸ್ತೆಗೆ ಹರಿದು ಬಿದ್ದಿದ್ದವು. ಇದರಿಂದಾಗಿ ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಶಂಭುಲಿಂಗ ಸಿ. ಹಿರೇಮಠ ಅವರು, ಜೆಸಿಬಿ ಹಾಗೂ ಸ್ಥಳೀಯರ ನೆರವಿನೊಂದಿಗೆ ಬಿದ್ದಿದ್ದ ಮರ ಮತ್ತು ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರೈತನ ಕಣ್ಣೀರು: 3 ಎಕರೆ ರಾಗಿ ಬೆಳೆ ನಾಶ

ಇತ್ತ ತಾಲ್ಲೂಕಿನ ಕಡತಿ ಗ್ರಾಮದಲ್ಲಿ ಬಿರುಗಾಳಿಯ ಆರ್ಭಟಕ್ಕೆ ರೈತ ಮಹೇಶಪ್ಪ ರಡ್ಡೇರ ಎಂಬುವವರಿಗೆ ಸೇರಿದ 3 ಎಕರೆ ರಾಗಿ ಬೆಳೆ ಸಂಪೂರ್ಣ ನೆಲಕಚ್ಚಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಹಾನಿಯಾಗಿರುವುದರಿಂದ ರೈತ ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮಹೇಶಪ್ಪ ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.