Home ಹರಪನಹಳ್ಳಿ : ಗಣರಾಜ್ಯೋತ್ಸವ ನಮ್ಮ ಹೆಮ್ಮೆ
Homeಸುದ್ದಿಗಳು

ಹರಪನಹಳ್ಳಿ : ಗಣರಾಜ್ಯೋತ್ಸವ ನಮ್ಮ ಹೆಮ್ಮೆ

Share
ಹರಪನಹಳ್ಳಿ : ಗಣರಾಜ್ಯೋತ್ಸವ ನಮ್ಮ ಹೆಮ್ಮೆ
Share

ಹರಪನಹಳ್ಳಿ :  ಗಣ ರಾಜ್ಯೋತ್ಸವ ದಿನ ದೆಹಲಿಯಲ್ಲಿ ಜರುಗುವ ಆಕರ್ಷಕ ಪಥಸಂಚಲನ ನಮ್ಮ ದೇಶದ ಹೆಮ್ಮೆ ಹಾಗೂ  ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 31 ರಾಜ್ಯಗಳ ಸ್ತಬ್ಧ ಚಿತ್ರಗಳು, ಅಶ್ವಪಡೆ, ವಾಯುಪಡೆ, ಸೈನಿಕರನ್ನು ಒಳಗೊಂಡಿರುವ ಫೆರೆಡ್ ಆಕರ್ಷಕವಾಗಿರುತ್ತದೆ. ಈ ಬಾರಿ ರಾಜ್ಯದ 13 ಜನ ಕನ್ನಡಿಗರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿರುವುದು ಸಂತೋಷ ತಂದಿದೆ ಎಂದು ಸ್ಮರಿಸಿದರು.

ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಟಿ ಸುರೇಶ್ ಕುಮಾರ್ ಸಂದೇಶ ನೀಡಿದರು. ಆವರಣದಲ್ಲಿ ಆಕರ್ಷಕ ಪಥಸಂಚಲನ, ಧ್ವಜ ವಂದನೆ ಜರುಗಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.  ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ಕ್ರೀಡಾಪಟುಗಳು, ಉತ್ತಮ ಸರ್ಕಾರಿ ನೌಕರರನ್ನು ತಾಲ್ಲೂಕು ಆಡಳಿತ ಪುರಸ್ಕರಿಸಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.

ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಂ.ಉದಯಶಂಕರ, ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ವೈ.ಎಚ್.ಚಂದ್ರಶೇಖರ, ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಡಿವೈಎಸ್ಪಿ ಸಂತೋಷ ಚೌವ್ಹಾಣ್, ಸಿಪಿಐ ಮಹಾಂತೇಶ ಸಜ್ಜನ್, ಸಹಾಯಕ ನಿರ್ದೇಶಕ ಗಂಗಪ್ಪ, ಪಿಎಸ್ಐ ಶಂಭುಲಿಂಗ ಹಿರೇಮಠ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.