Home ತಾಲ್ಲೂಕು ಆಡಳಿತ ಸೌಧದಲ್ಲಿ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಹಾಗೂ ಸಫಾಯಿ ಕರ್ಮಚಾರಿ ಸಮಿತಿ ಸಭೆ
Homeಸುದ್ದಿಗಳು

ತಾಲ್ಲೂಕು ಆಡಳಿತ ಸೌಧದಲ್ಲಿ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಹಾಗೂ ಸಫಾಯಿ ಕರ್ಮಚಾರಿ ಸಮಿತಿ ಸಭೆ

Share
Share

ಹರಪನಹಳ್ಳಿ :ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಬುಧವಾರ ಆಯೋಜಿಸಿದ್ದ ಕಂದಾಯ ಉಪವಿಭಾಗದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆ ಜಾಗೃತಿ ಮತ್ತು ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಸಮಿತಿ ಸಭೆ ಜರುಗಿತು.

ಅಧ್ಯಕ್ಷತೆ ವಹಿಸಿ ಉಪವಿಬಾಗಾಧಿಕಾರಿ ಟಿ.ಸುರೇಶ್ ಕುಮಾರ ಮಾತನಾಡಿ, ಕೊಟ್ಟೂರಿನಲ್ಲಿ ಕಾರ್ಮಿಕರಿಗೆ ನಿವೇಶನ ಹಂಚಿಕೆಗೆ ಜಾಗ ಗುರುತಿಸುವಂತೆ ಒಳಚರಂಡಿ ಮಂಡಳಿಯಿಂದ ಪತ್ರ ಬಂದಿದೆ ಎಂದು ತಿಳಿಸಿದರು.

ಕೊಟ್ಟೂರಿನಲ್ಲಿ ಒಂದು, ಹೂವಿನ ಹಡಗಲಿ 2 ಜಾತಿನಿಂಧನೆ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿರುವ ಕುರಿತು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಅವರು ವಿಷಯ ಪ್ರಸ್ತಾಪಿಸಿದರು. ಯಾವುದೇ ಜಾತಿ, ಧರ್ಮ, ಸಂಘಟನೆಗಳ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದು, ಅಸ್ಪೃಶ್ಯತೆ ಆಚರಣೆ, ಜಾತಿ ನಿಂಧನೆ ಪ್ರಕರಣ ಕಂಡುಬಂದರೆ ತಕ್ಷಣ ಕ್ರಮವಹಿಸಿ ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಮದ್ಯ ಪ್ರವೇಶಿಸಿದ ಸಮಿತಿ ಸದಸ್ಯ ಗೋಣೆಪ್ಪ ಮಾತನಾಡಿ, ಗಲಾಟೆ ನಡೆದ ತಕ್ಷಣ ಸ್ಥಳಕ್ಕೆ ಬೇಟಿ ನೀಡಿ ಜಾಗೃತಿ ಮೂಡಿಸಲಾಗಿದೆ ಎಂದರು.

ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಅವರು ಮಾತನಾಡಿ, ತಾಲ್ಲೂಕು ಪಂಚಾಯಿತಿಯಲ್ಲಿ ರೂ. 20 ಲಕ್ಷ ಹಣ ದುರುಪಯೋಗವಾಗಿದೆ ಎಂದು ಪರಿಶಿಷ್ಟ ಸಮುದಾಯದ ಸಿಬ್ಬಂದಿ ಮೇಲೆ ಎಫ್ಐಆರ್ ಮಾಡಿರುವ ಬಗ್ಗೆ ಪ್ರಸ್ತಾಪಿಸಿದರು, ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಅವರು, ಆಡಿಟ್ ತನಿಖಾ ವರದಿ ಹಾಗೂ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ಎನ್ಆರ್ಎಲ್ಎಂ ಯೋಜನೆ ಸಿಬ್ಬಂದಿ ಮೇಲೆ ದೂರು ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಮಿತಿಯ ಸದಸ್ಯ ಮೈದೂರು ಒ.ರಾಮಪ್ಪ ಮಾತನಾಡಿ, ಆದಿಜಾಂಭವ ಅಭಿವೃದ್ದಿ ನಿಗಮದ ಸೌಲಭ್ಯಗಳು 35 ಸಾವಿರದಷ್ಟಿರುವ ಮಾದಿಗರ ಜನಸಂಖ್ಯೆಗೆ ಅನುಗುಣವಾಗಿ ಸವಲತ್ತುಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಸಭೆ ಗಮನ ಸೆಳೆದರು, ಆಗ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತಂದು ಸರಿಪಡಿಸಲಾಗುವುದು ಎಂದು ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ತಿಳಿಸಿದರು.

ಸಮಿತಿ ಸದಸ್ಯ ಕಾರ್ಯದರ್ಶಿಯು ಆಗಿರುವ ಸಹಾಯಕ ನಿರ್ದೇಶಕ ಎಸ್.ಆರ್.ಗಂಗಪ್ಪ ಮಾತನಾಡಿ, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ವಿವಿಧ ಅಭಿವೃದ್ದಿ ನಿಗಮಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಕೊಟ್ಟೂರು, ಹರಪನಹಳ್ಳಿ ಹಾಗೂ ಹಡಗಲಿ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹರಪನಹಳ್ಳಿ ನಗರಸಭೆ ಪೌರಾಯುಕ್ತೆ ರೇಣುಕಾ ಎಸ್ ದೇಸಾಯಿ, ಹಡಗಲಿ ಪುರಸಭೆ ಮುಖ್ಯಾಧಿಕಾರಿ, ಹಡಗಲಿ ಇಒ ಪರಮೇಶ್ವರಪ್ಪ, ಹರಪನಹಳ್ಳಿ ಇಒ ವೈ.ಎಚ್.ಚಂದ್ರಶೇಖರ, ಪಿಎಸ್ಐ ಶಂಭುಲಿಂಗ ಸಿ ಹಿರೇಮಠ, ಸಮಿತಿ ಸದಸ್ಯೆ ಜಾನ್ಸಿ, ವ್ಯವಸ್ಥಾಪಕಿ ಯಾಸ್ಮಿನ್ ಶುಗುಪ್ತಾ, ವಾರ್ಡನ್ ಬಸವರಾಜ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.