Home ಹರಪನಹಳ್ಳಿ: ಸೇವಾನಗರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಐಎಸ್ಎ (AISA) ಪ್ರತಿಭಟನೆ
Home

ಹರಪನಹಳ್ಳಿ: ಸೇವಾನಗರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಐಎಸ್ಎ (AISA) ಪ್ರತಿಭಟನೆ

Share
Share

ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ವತಿಯಿಂದ ಶುಕ್ರವಾರ (ಜೂನ್ 19) ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ ಸಾರಿಗೆ ಸಂಸ್ಥೆಯ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಹಿಂದೆಯೂ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು.

ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬಸ್ ಸೌಲಭ್ಯವಿಲ್ಲದೆ ಸೇವಾನಗರ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಆಸ್ಪತ್ರೆಗೆ ತೆರಳುವ ವಯೋವೃದ್ಧರು, ರೋಗಿಗಳು ತೀವ್ರ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಪ್ರಮುಖ ಬೇಡಿಕೆಗಳು:
* ಹರಪನಹಳ್ಳಿಯಿಂದ ದಾವಣಗೆರೆಗೆ ಹೋಗುವ ಸರ್ಕಾರಿ ಬಸ್‌ಗಳನ್ನು ಚಿಗಟೇರಿ ಗ್ರಾಮದ ಶಿಲ್ಪಿ ರಸ್ತೆಯ ಮೂಲಕ ಸೇವಾನಗರ ಗ್ರಾಮಕ್ಕೆ ಬಂದು ಹೋಗುವಂತೆ ಮಾಡಬೇಕು.
* ಕಾಂಚಿಕೆರೆಯಿಂದ ಬರುವ ಬಸ್‌ಗಳು ಕಡ್ಡಾಯವಾಗಿ ಸೇವಾನಗರದ ಮುಖಾಂತರ ಸಂಚರಿಸುವಂತೆ ತಕ್ಷಣವೇ ಆದೇಶ ಹೊರಡಿಸಬೇಕು.
*ಸಮಸ್ಯೆಯನ್ನು ಶೀಘ್ರವೇ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಮನವಿಯಲ್ಲಿ ನೀಡಲಾಗಿದೆ. ಈ ಸಂದರ್ಭದಲ್ಲಿ ಎಐಎಸ್ಎ ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.