Home ಸರ್ಕಾರಿ ಶಾಲೆಗಳ ಖಾಸಗೀಕರಣ, ವಿಲೀನ ವಿರೋಧಿಸಿ ಪ್ರತಿಭಟನೆ
Homeಸುದ್ದಿಗಳು

ಸರ್ಕಾರಿ ಶಾಲೆಗಳ ಖಾಸಗೀಕರಣ, ವಿಲೀನ ವಿರೋಧಿಸಿ ಪ್ರತಿಭಟನೆ

Share
Share

ಹರಪನಹಳ್ಳಿ : ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷವಾಕ್ಯದೊಂದಿಗೆ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಮತ್ತು ವಿಲೀನಗೊಳಿಸುವ ರಾಜ್ಯ ಸರ್ಕಾರದ ನೀತಿ ವಿರುದ್ಧ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಪದಾಧಿಕಾರಿಗಳು ಗುರುವಾರ ಆಕ್ರೋಶ ವ್ಯಕ್ತಪಡಿಸಿದರು. ನಗರದ ವಿವಿಧ ಪಿಯು ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ, ಖಾಸಗೀಕರಣ ನೀತಿ ಕೈಬಿಡಲು ಆಗ್ರಹಿಸಿದರು.

ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಸಂಜನಾಯ್ಕ ಎಲ್.ಜಿ. ಮಾತನಾಡಿ, ರಾಜ್ಯ ಸರ್ಕಾರವು 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಣೆ ಮಾಡುವ ಹಾಗೂ ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವ ಹೆಸರಿನಲ್ಲಿ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. 2014-15ರಲ್ಲಿ ರಾಜ್ಯದಲ್ಲಿ 75,812 ಸರ್ಕಾರಿ ಶಾಲೆಗಳಿದ್ದವು. ಆದರೆ 2026ರ ವೇಳೆಗೆ ಈ ಸಂಖ್ಯೆ 46,483ಕ್ಕೆ ಕುಸಿದಿದ್ದು, ಕಳೆದ 12 ವರ್ಷಗಳಲ್ಲಿ ಬರೋಬ್ಬರಿ 29,329 ಶಾಲೆಗಳು ಮುಚ್ಚಲ್ಪಟ್ಟಿವೆ.

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಪಠ್ಯಪುಸ್ತಕ ವಿತರಣೆ ವಿಳಂಬ, ಸೈಕಲ್ ಯೋಜನೆ ಸ್ಥಗಿತ ಹಾಗೂ ಕಳಪೆ ಗುಣಮಟ್ಟದ ಸಮವಸ್ತ್ರ-ಶೂ ವಿತರಣೆಯಿಂದಾಗಿ 2015-16ರಲ್ಲಿ 47.1 ಲಕ್ಷದಷ್ಟಿದ್ದ ದಾಖಲಾತಿ 2025-26ರಲ್ಲಿ 38.2 ಲಕ್ಷಕ್ಕೆ (ಶೇ.19ರಷ್ಟು) ಇಳಿಕೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 79,694 ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ತಾಲೂಕು ಕಾರ್ಯದರ್ಶಿ ಕೆ. ಆಕಾಶ್, ಸಂಜುನಾಯ್ಕ, ಮಂಗಳಾ, ವಿದ್ಯಾರ್ಥಿಗಳಾದ ರೋಹಿತ್, ನಿಂಗರಾಜ್, ಪ್ರಶಾಂತ್, ಪೃಥ್ವಿರಾಜ್, ಅಂಕಿತಾ, ಕೀರ್ತಿ, ಸಿಂಚನ ಇದ್ದರು. ಹರಪನಹಳ್ಳಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಪದಾಧಿಕಾರಿಗಳು ಗುರುವಾರ ತಹಶೀಲ್ದಾರ ನಟರಾಜ್ ಅವರಿಗೆ ಮನವಿ ಸಲ್ಲಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

11 ಕಾಡು ಮೊಲಗಳ ಬೇಟೆ: ಮೂವರ ಬಂಧನ

ಬಳ್ಳಾರಿ : ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ...

Homeಸುದ್ದಿಗಳು

ಆಸ್ತಿ ವಿವಾದ: ಸಹೋದರನ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಆಸ್ತಿ ಪಾಲು ವಿಭಾಗದ ವಿಚಾರವಾಗಿ ಉಂಟಾದ ಮನಸ್ತಾಪದಿಂದ ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ...

bagalikanakadasa-jayanti-celebrated-at-bagali-government-school-harapanahalli
Homeಸುದ್ದಿಗಳು

ಬಾಗಳಿ ಸರ್ಕಾರಿ ಶಾಲೆಯಲ್ಲಿ ಸಡಗರದ ಕನಕದಾಸ ಜಯಂತಿ

ಹರಪನಹಳ್ಳಿ (ಬಾಗಳಿ) : ತಾಲ್ಲೂಕಿನ ಬಾಗಳಿ ಗ್ರಾಮದ ನಂದಿಬೇವೂರು ಗುರುಬಸಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

Homeಸುದ್ದಿಗಳು

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ:ಕೇಂದ್ರ ಸರ್ಕಾರದ ರೈತ ಮತ್ತು ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.