Home ಕ್ರೀಡೆ ಅಂಗವಿಕಲರ ಕ್ರೀಡಾಕೂಟ ಡಿ.15ಕ್ಕೆ 
ಕ್ರೀಡೆ

ಅಂಗವಿಕಲರ ಕ್ರೀಡಾಕೂಟ ಡಿ.15ಕ್ಕೆ 

Share
Share

ಹರಪನಹಳ್ಳಿ :  ಇಲ್ಲಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಡಿ.15ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಅಂಗವಿಕಲರಿಗಾಗಿ ತಾಲ್ಲೂಕು ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ತಿಳಿಸಿದರು.

ಸ್ಪರ್ಧೆಯಲ್ಲಿ ವಿಜೇತರಿಗೆ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು.  ಅಂಗವಿಕಲಗಿಗಾಗಿ ಊರುಗೋಲು ಓಟ, ಗುಂಡು ಎಸೆತ, ವೀಲ್ ಚೇರ್ ಓಟ, ದೃಷ್ಟಿದೋಷವುಳ್ಳವರಿಗೆ ಬಿಳಿ ಕೋಲು ಓಟ, ಗುಂಡು ಎಸೆತ, ಶ್ರವಣ ದೋಷವುಳ್ಳವರಿಗೆ ಓಟ, ರಿಂಗ್ ಎಸೆತ, ಕ್ರಿಕೆಟ್, ಗುಂಡು ಎಸೆತ, ಬೌದ್ಧಿಕ ವಿಕಲಚೇತನರಿಗೆ ಚೆಂಡು ಎಸೆತ, ಮ್ಯುಸಿಕಲ್ ಚೇರ್ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ದೈಹಿಕ ವಿಕಲಚೇತನರಿಗೆ ಭಾವಗೀತೆ, ಜಾನಪದ ಗೀತೆ, ಭಾವಗೀತೆ, ಜಾನಪದ, ಚಿತ್ರಕಲೆ, ವೇಷಭೂಷಣ ಸ್ಪರ್ಧೆಗಳು ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9901182525 ಸಂಖ್ಯೆ ಸಂಪರ್ಕಿಸಲು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಕ್ರೀಡೆ

ಹರಪನಹಳ್ಳಿ : ಸಮತ ರೆಸಾರ್ಟ್‍ನಲ್ಲಿ ವಿಚಾರಗೋಷ್ಠಿ

ಹರಪನಹಳ್ಳಿ : ರಾಜಕೀಯ ಪ್ರಜಾಪ್ರಭುತ್ವ ದುರ್ಬಳಕೆ ಆಗುತ್ತಿದೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ ಜಾತಿ ಮೇಲೆ...

Homeಕ್ರೀಡೆ

ಸಮತಾ ರೆಸಾರ್ಟ್ ಪ್ರಗತಿಪರ‌‌ ಚಿಂತನೆಗಳ ಕೇಂದ್ರ

ಹರಪನಹಳ್ಳಿ : ಬುದ್ದ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಣ್ಣನವರು ತಮ್ಮ...

renukadevi
Homeಕ್ರೀಡೆ

ಪರಿಸರ ಜಾಗೃತಿಗಾಗಿ ದಾವಣಗೆರೆಯಲ್ಲಿ ಸೈಕಲ್ ಜಾಥಾ

ದಾವಣಗೆರೆ  : ಯುವಜನರು ಮತ್ತು ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಸೈಕಲ್ ಬಳಕೆಯನ್ನು ಹೆಚ್ಚಿಸಬೇಕು ಎಂದು ದಾವಣಗೆರೆ...

kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.