Home ಶಿಕ್ಷಣ   ಹರಪನಹಳ್ಳಿ ಜಿಲ್ಲೆಗೆ 3ನೇ ಸ್ಥಾನ; ಬಿಇಒ ಲೇಪಾಕ್ಷಪ್ಪ ಅವರಿಗೆ ಸನ್ಮಾನ
ಶಿಕ್ಷಣ

  ಹರಪನಹಳ್ಳಿ ಜಿಲ್ಲೆಗೆ 3ನೇ ಸ್ಥಾನ; ಬಿಇಒ ಲೇಪಾಕ್ಷಪ್ಪ ಅವರಿಗೆ ಸನ್ಮಾನ

Share
SSLC Results 2026, ಎಸ್ಸೆಸ್ಸೆಲ್ಸಿ ಫಲಿತಾಂಶ,
Share

ಹರಪನಹಳ್ಳಿ: 2025-26ನೇ ಸಾಲಿನ ಎಸ್.ಎಸ್‍.ಎಲ್‍.ಸಿ. ಫಲಿತಾಂಶದಲ್ಲಿ ತಾಲ್ಲೂಕನ್ನು ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಲೇಪಾಕ್ಷಪ್ಪ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಬಿಇಒ ಲೇಪಾಕ್ಷಪ್ಪ, ಇಸಿಒಗಳಾದ ವೀರೇಶ್, ಪಂಪನಾಯ್ಕ್ ಹಾಗೂ ಲತಾ ರಾಥೋಡ್ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್. ಜಿ.ಮನೋಹ,  “ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಸಮನ್ವಯದ ಪರಿಶ್ರಮದಿಂದಾಗಿ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಈ ಫಲಿತಾಂಶವು ಮುಂಬರುವ ವರ್ಷಗಳಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಇನ್ನಷ್ಟು ಬಲ ನೀಡಲಿದೆ” ಎಂದರು.

ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಿ. ಸೂರ್ಯ ನಾಯಕ್, ರಾಜ್ಯ ಪರಿಷತ್ ಸದಸ್ಯರಾದ  ಷರೀಫ್ ಮಕರಬ್ಬಿ, ಮಂಜುನಾಥ್ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಕೆ. ಅಂಜಿನಪ್ಪ, ಪ್ರೌಢಶಾಲೆ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ಗುರುಮೂರ್ತಿ,   ಸಾವಿತ್ರಿಬಾಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಟಿ.ಹೆಚ್.ಎಂ. ಲತಾ, ಶಾಲಾ ಶಿಕ್ಷಣ ಇಲಾಖೆ ಸಂಘದ ಅಧ್ಯಕ್ಷ ಎಲ್.ಹೆಚ್. ಗಿರಿರಾಜ್, ನೌಕರರ ಸಂಘದ ತಾಲ್ಲೂಕು ಉಪಾಧ್ಯಕ್ಷ ಸಂಗಯ್ಯ, ಶಶಿಕಲಾ ಉಪಸ್ಥಿತರಿದ್ದರು. ನಿರ್ದೇಶಕರಾದ ಎಸ್.ಶಫಿವುಲ್ಲಾ., ಶ್ರೀಕಾಂತ್, ನಿಂಗಪ್ಪ, ಮಲ್ಲಿಕಾರ್ಜುನ, ಅಶೋಕ್, ಕುಮಾರ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು ಈ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.