Home ಮೌಲ್ಯ ಬಿತ್ತುವವರೇ ನಿಜವಾದ ಶಿಲ್ಪಿಗಳು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Homeಸುದ್ದಿಗಳು

ಮೌಲ್ಯ ಬಿತ್ತುವವರೇ ನಿಜವಾದ ಶಿಲ್ಪಿಗಳು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Share
Share

ಹರಪನಹಳ್ಳಿ : “ಶಿಕ್ಷಕರು ತಮ್ಮ ವೈಯಕ್ತಿಕ ಆಡಂಬರದ ಜೀವನಕ್ಕಿಂತ ವಿದ್ಯಾರ್ಥಿಗಳು ದೊಡ್ಡ ಮಟ್ಟಕ್ಕೆ ಬೆಳೆಯಬೇಕೆಂಬ ಕನಸು ಕಾಣುತ್ತಾರೆ. ಅವರು ಮಕ್ಕಳ ಬದುಕಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಸಾಮಾಜಿಕ ಕಳಕಳಿ ಹಾಗೂ ಮೌಲ್ಯಗಳನ್ನು ಬಿತ್ತುವ ನಿಜವಾದ ಶಿಲ್ಪಿಗಳು” ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು. ನಗರದ ತರಳಬಾಳು ಕಲ್ಯಾಣ ಮಂಟಪದ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಬೇರೆ ಇಲಾಖೆಗಳಲ್ಲಿರುವಂತೆ ಶಿಕ್ಷಕರ ಹೆಸರಿನ ಮುಂದೆಯೂ ‘ಟಿಆರ್’ (TR) ಎಂಬ ಗೌರವ ಸೂಚಕ ಪದ ಬಳಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕಾದರೆ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯ. ಮಕ್ಕಳ ಪರಿಸ್ಥಿತಿಗೆ ಅನುಗುಣವಾಗಿ, ಪೋಷಕರಂತೆ ನಿಂತು ಅವರ ಬದುಕನ್ನು ಕಟ್ಟುವ ಶಿಕ್ಷಕರ ಕಾರ್ಯ ಅತ್ಯಂತ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಮರಕ್ಕೆ ಬೇರು ಗಟ್ಟಿಯಾಗಿದ್ದರೆ ಯಾವುದೇ ಕಠಿಣ ಪರಿಸ್ಥಿತಿಯನ್ನೂ ಎದುರಿಸಬಹುದು. ಅಂತೆಯೇ ಬೆಳೆಯುವ ಮೊಳಕೆಗೆ ಪೋಷಕಾಂಶಗಳನ್ನು ನೀಡುವ ಮೂಲಕ ಮಕ್ಕಳ ಸರ್ವತೋಮುಖ ಪ್ರಗತಿಗೆ ಶಿಕ್ಷಕರು ಶ್ರಮಿಸುತ್ತಿದ್ದಾರೆ.” “ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇರುವ ಹಲವು ಅಡೆತಡೆಗಳನ್ನು ನಿವಾರಿಸಬೇಕಿದೆ. ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸಿದಾಗ ಮಾತ್ರ ಪ್ರಗತಿ ಸಾಧ್ಯ. ಸರ್ಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸರ್ಕಾರವೇ ವಿವಿಧ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ.”

ಅಧ್ಯಕ್ಷತೆವಹಿಸಿದ್ದ ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಮಾತನಾಡಿ, ಶಿಕ್ಷಕರಲ್ಲಿ ಯಾವುದೇ ಭೇದ ಭಾವವಿಲ್ಲ, ನಿಮ್ಮಲ್ಲಿ ಹೊಂದಾಣಿಕೆಯಾಗದೆ ಇದ್ದಲ್ಲಿ ಮಾತ್ರ ಮುಂದಿನ ಬಾರಿ ನಾನು ಕಾರ್ಯಕ್ರಮಕ್ಕೆ ಬರುತ್ತೇನೆ. ಪುರಾತನ ಕಾಲದಲ್ಲಿ ಮರಳಿನಲ್ಲಿ ಅಭ್ಯಾಸ ಮಾಡಲಾದಾಗಿನಿಂದ ಇಂದು ಕಂಪ್ಯೂಟರ್ ಮೂಲಕ ಕಲಿಯುವವರಿಗೆ ಆಧುನಿಕ ಯುಗ ಮುಂದುವರೆದಿದೆ.
ಕಲಿಕಾ ವಿಧಾನ ಬೇರೆ ತೆರೆನಾಗಿರಬಹುದು, ಶಿಕ್ಷಣಕ್ಕೆ ಭಾರತವು ಎತ್ತರದಲ್ಲಿದೆ, ಶಿಕ್ಷಣದ ಬುನಾದಿಯಿಂದ ನಾವುಗಳು ಎತ್ರಕ್ಕೆ ಬೆಳೆಯಲು ಸಾದ್ಯವಾಗಿದೆ, ನಮ್ಮ ಮಕ್ಕಳ ಯಶಸ್ಸಿಗೆ ಮತ್ತು ಅವರ ಕನಿಷ್ಟ ಸ್ಥಾನಕ್ಕೆ ತಲುಪಲು ಶಿಕ್ಷಕರು ಕಾರಣ, ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು.

371 ಜೆ ಇಲ್ಲದೆ ಇದ್ದದ್ದ ಹೋದಲಿ ಯಾವುದೇ ಅನುದಾನ ಬರುತ್ತಿರಲಿಲ್ಲ ಅದಕ್ಕೆ ಎಂ ಪಿ ರವೀಂದ್ರ ರವರೆ ಕಾರಣ, ಶಿಕ್ಷಣದ ಏಳ್ಗೆಗಾಗಿ ಅಕ್ಷರ ಆವಿಶ್ಕಾರ, ಕೆಪಿಎಸ್ ಅಭಿವೃದ್ಧಿಗೆ ಶಿಕ್ಷಣ ಇಲಾಖೆ ಸಾಕಷ್ಟು ಶ್ರಮಿಸುತ್ತಿದೆ, ಆರು ಪಬ್ಲಿಕ್ ಶಾಲೆಗಳಿಗೆ ಅನುಮತಿ ಸಿಕ್ಕಿದ್ದು, ಇನ್ನೂ 15 ಪಬ್ಲಿಕ್ ಶಾಲೆ ಮುಂಜೂರಾತಿಗೆ ಸಚಿವರ ಬಳಿ ಮನವಿ ಮಾಡಲಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ ಮಾತನಾಡಿ, ಶಿಕ್ಷಣದ ಪ್ರಗತಿಗೆ ಎಲ್ಲರೂ ಶ್ರಮಿಸಿದಾಗ ಮಾತ್ರ ಶಿಕ್ಷಣದ ಬದಲಾವಣೆ ಸಾದ್ಯ, ಪ್ರಾಮಾಣಿಕ ಜೀವನ ನಡೆಸುವುದನ್ನು ಮಕ್ಕಳಿಗೆ ಕಲಿಸುವವರು ಶಿಕ್ಷಕರು, 175 ಶೌಚಾಲಯ 68 ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ, ಪ್ರತಿ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಒದಗಿಸಲಾಗಿದೆ ಅದನ್ನು ಸ್ಪರ್ದಾರ್ಥಿಗಳು ಉಪಯೋಗ ಮಾಡಿಕೊಳ್ಳಬೇಕು ಎಂದರು.

ಶಿಕ್ಷಕರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಲಾಯಿತು. ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಉದಯಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಪೌರಾಯುಕ್ತೆ ರೇಣುಕಾ ದೇಸಾಯಿ, ಸಹಾಯಕ ನಿರ್ದೇಶಕ ಕೆ.ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ ಹಾಗೂ ಮುಖಂಡರು, ಸರ್ಕಾರಿ ನೌಕರರ ಸಂಘ, ಶಿಕ್ಷಕರ ಸಂಘದ ಪದಾಧಿಕಾರಿಗಳಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.