Home ಶಿಕ್ಷಣ ಹರಪನಹಳ್ಳಿ: ನ್ಯಾಯಾಲಯದ ಆದೇಶ ಗೌರವಿಸಿದ ಶಿಕ್ಷಕ ಅಭ್ಯರ್ಥಿಗಳಿಗೆ ಸನ್ಮಾನ
ಶಿಕ್ಷಣಸುದ್ದಿಗಳು

ಹರಪನಹಳ್ಳಿ: ನ್ಯಾಯಾಲಯದ ಆದೇಶ ಗೌರವಿಸಿದ ಶಿಕ್ಷಕ ಅಭ್ಯರ್ಥಿಗಳಿಗೆ ಸನ್ಮಾನ

Share
Share

ಹರಪನಹಳ್ಳಿ: ನ್ಯಾಯಾಲಯದಲ್ಲಿ ಚುನಾವಣೆಗೆ ಮಧ್ಯಂತರ ತಡೆ ಆದೇಶ ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದ ಆದೇಶ ಪಾಲಿಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಿಂದ ಸ್ವಯಂಪ್ರೇರಿತರಾಗಿ ದೂರ ಉಳಿದ 22 ಅಭ್ಯರ್ಥಿಗಳನ್ನು ಅಭಿನಂದಿಸಿದ ಘಟನೆ ನಡೆಯಿತು.

ಶನಿವಾರ ಇಲ್ಲಿನ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಲಯದ ಆದೇಶ ಪಾಲಿಸಿ ಚುನಾವಣೆಯಿಂದ ದೂರ ಉಳಿದ ಈ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ವೆಂಕಟೇಶ್ ಮಾತನಾಡಿ, “ನ್ಯಾಯಾಲಯದ ಆದೇಶ ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಏ.30ರಂದೇ ತಡೆಯಾಜ್ಞೆ ಆದೇಶವಾಗಿದೆ. ಚುನಾವಣಾ ಅಧಿಕಾರಿಗಳು ಪಕ್ಷಪಾತ ಮಾಡದೇ ಆದೇಶದ ಪ್ರತಿ ಪರಿಶೀಲಿಸಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕಿತ್ತು. ಆದರೆ ಅವರು ಪಾಲಿಸದಿರುವುದು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತೆ. ಆ ಚುನಾವಣಾ ಫಲಿತಾಂಶ ಸ್ವಯಂ ಘೋಷಿತ, ಅದು ಯಾವುದೇ ಅರ್ಹತೆ ಪಡೆಯುವುದಿಲ್ಲ,” ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಮಾತನಾಡಿ, ನಿಜವಾದ ಅರ್ಥದಲ್ಲಿ ನ್ಯಾಯಾಲಯದ ಆದೇಶ ಪಾಲಿಸಿದ ಅಭ್ಯರ್ಥಿಗಳೇ ಜಯಶಾಲಿಗಳು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್‍.ಜಿ.ಮನೋಹರ, ಕಾರ್ಯದರ್ಶಿ ಸೂರ್ಯನಾಯ್ಕ, ರಾಜ್ಯ ಪರಿಷತ್ ಸದಸ್ಯ ಮಕರಬ್ಬಿ ಷರೀಪ್, ಮಂಜುನಾಥ ಪೂಜಾರ, ಎ.ನಾಗೇಂದ್ರಪ್ಪ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಗುರುಮೂರ್ತಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಟಿ.ಎಚ್‍.ಎಂ. ಲತಾ, ಗಿರಿರಾಜ್, ಕೆ.ಅಂಜಿನಪ್ಪ, ಸುಬ್ಬಣ್ಣ, ಶಫಿ, ಉಸ್ಮಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.