Home ಜಿ. ಸದಾನಂದನಾಯ್ಕಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ
Homeಸುದ್ದಿಗಳು

ಜಿ. ಸದಾನಂದನಾಯ್ಕಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ

Share
Share

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದ (ಹೊಸಪೇಟೆ) ವತಿಯಿಂದ ನೀಡಲಾಗುವ 2026-27ನೇ ಸಾಲಿನ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ತಾಲ್ಲೂಕಿನ ತೌಡೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಜಿ. ಸದಾನಂದನಾಯ್ಕ ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿನ ಅವರ ಸಮರ್ಪಣಾ ಮನೋಭಾವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಇಲಾಖೆಯು ಈ ಪ್ರಶಸ್ತಿಗೆ ಆಯ್ಕೆ ಮಾಡಿ, ಅಧಿಕೃತ ಆದೇಶ ಹೊರಡಿಸಿದೆ. ಪ್ರಶಸ್ತಿಗೆ ಭಾಜನರಾದ ಜಿ. ಸದಾನಂದನಾಯ್ಕ ಅವರನ್ನು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ, ತೌಡೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸೈಯದ್ ಮುಬೀನ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ಘಟಕದ ಅಧ್ಯಕ್ಷ ಮನೋಹರ್ ಎನ್.ಜಿ. ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ತೌಡೂರು ಗುರುಮೂರ್ತಿ, ತೌಡೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸೈಯದ್ ಮುಬೀನ್, ಹಾಗೂ ಶಾಲೆಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದ ಹರ್ಷ ವ್ಯಕ್ತಪಡಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.