Home ಹರಪನಹಳ್ಳಿ : ಸಮಾಜ ಒಗ್ಗಟ್ಟಿಗಾಗಿ ವಾಲ್ಮೀಕಿ ಜಾತ್ರೆ
Homeಸುದ್ದಿಗಳು

ಹರಪನಹಳ್ಳಿ : ಸಮಾಜ ಒಗ್ಗಟ್ಟಿಗಾಗಿ ವಾಲ್ಮೀಕಿ ಜಾತ್ರೆ

Share
ಹರಪನಹಳ್ಳಿ : ಸಮಾಜ ಒಗ್ಗಟ್ಟಿಗಾಗಿ ವಾಲ್ಮೀಕಿ ಜಾತ್ರೆ
Share

ಹರಪನಹಳ್ಳಿ : ‘ವೈಚಾರಿಕತೆ ಸಂದೇಶ ಸಾರುವ ವಾಲ್ಮೀಕಿ ಜಾತ್ರೆಗೆ ಹೆಚ್ಚಿನ ಜನರನ್ನು ತಾಲ್ಲೂಕಿನಿಂದ ಕರೆದೊಯ್ಯುವ ಸಲುವಾಗಿ 11 ದಿನ 150 ಹಳ್ಳಿಗಳಲ್ಲಿ ವಾಲ್ಮೀಕಿ ಜಾತ್ರೆಯ ಜಾಗೃತಿ ಮೂಡಿಸಲಾಗಿದೆ’ ಎಂದು ವಾಲ್ಮೀಕಿ ಸಮಾಜದ ಗೌರವ ಅಧ್ಯಕ್ಷ ಎಚ್.ಕೆ.ಹಾಲೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ಸಮಾಜ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ‘ಸಾಮಾಜಿಕ, ವೈಚಾರಿಕತೆ, ಶೈಕ್ಷಣಿಕ, ರಾಜಕೀಯವಾಗಿ ಸಮಾಜ ಒಗ್ಗೂಡಿಸುವುದು ವಾಲ್ಮೀಕಿ ಜಾತ್ರೆಯ ಉದ್ದೇಶ.  ಇದರಿಂದ ರಾಜ್ಯದಲ್ಲಿರುವ 40 ಲಕ್ಷ ವಾಲ್ಮೀಕಿ ಸಂಘಟನೆಗೆ ಅನುಕೂಲವಾಗುತ್ತಿದೆ’ ಎಂದರು.

ಹರಪನಹಳ್ಳಿ : ಸಮಾಜ ಒಗ್ಗಟ್ಟಿಗಾಗಿ ವಾಲ್ಮೀಕಿ ಜಾತ್ರೆ

ಎಸ್ಟಿಗೆ ಕೊಟ್ಟಿರುವ ಮೀಸಲಾತಿ 7ರ ಅಂಶವನ್ನು  9ನೇ ಪರಿಚ್ಚೇದದಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಬೆಂಗಳೂರಿನಲ್ಲಿ ಕೊಟ್ಟಿರುವ 8 ಎಕರೆ ಜಮೀನಿನಲ್ಲಿ ಶ್ರೀಮಠವು ಎಸ್ಟಿ ಸಚಿವಾಲಯ, ಕೌ‍ಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೇಂದ್ರ ಸೇರಿ ಹಲವು ಯೋಜನೆ ಅನುಷ್ಠಾನಗೊಳಿಸಲು ರೂ.300 ಕೋಟಿ ಕ್ರಿಯಾಯೋಜನೆ ತಯಾರಿಸಿದೆ. ಅದನ್ನು ಅನುಮೋದಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಾಲ್ಮೀಕಿ ಜಾತ್ರಾ ಸಮಿತಿ ತಾಲ್ಲೂಕು ಅಧ್ಯಕ್ಷ ಆರ್.ಲೋಕೇಶ ಮಾತನಾಡಿ, ರಾಜ್ಯದಿಂದ  ಜಾತ್ರೆಗೆ 5 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಸ್ವಾಮೀಜಿ ಅವರ ನೇತೃತ್ವದಲ್ಲಿ ಸಮಾಜದ ಏಳ್ಗೆಗೆ ಹೋರಾಟಕ್ಕೆ ಸದಾ ಸಿದ್ದ ರಾಗಿದ್ದೇವೆ ಎಂದರು.

ಸಂಪೂರ್ಣ ರಾಮಾಯಣ ನಾಟಕ

ವಾಲ್ಮೀಕಿ ಸಮಾಜದ ಮಾಜಿ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿ, 8ನೇ  ವರ್ಷದ ವಾಲ್ಮೀಕಿ ಜಾತ್ರೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ. ನಗರ ಪ್ರದೇಶ ಸೇರಿದಂತೆ ತಾಲ್ಲೂಕಿನ ಎಲ್ಲ ಹಳ್ಳಿಗಳನ್ನು ತಿರುಗಾಡಿ ಜಾಗೃತಿ ಮೂಡಿಸಲಾಗಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪಿಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಜನಾಂಗದ ಒಳಿತಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ನೈತಿಕ ಶಕ್ತಿ ತುಂಬಲು ಮತ್ತು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ನಾವು ಸದಾ ಬದ್ದರಾಗಿದ್ದೇವೆ.  ಜಾತ್ರೆಯಲ್ಲಿ ಸಂಪೂರ್ಣ ರಾಮಾಯಣ ನಾಟಕ, ಧರ್ಮ ಸಭೆ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗುತ್ತವೆ ಎಂದು ತಿಳಿಸಿದರು.

ವಾಲ್ಮೀಕಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಟಿ.ವನಜಾಕ್ಷಮ್ಮ ಮಾತನಾಡಿ, ‘ಜಾತ್ರೆ ಎಂದರೆ ಸಂಪ್ರದಾಯವಲ್ಲ, ಅದೊಂದು ಜಾಗೃತಿಯ ಕೇಂದ್ರವಾಗಿದೆ’ ಎಂದು ತಿಳಿಸಿದರು.  ಕಾರ್ಯದರ್ಶಿ  ಎಚ್.ಕೆ.ಮಂಜುನಾಥ, ಮಹಿಳಾ ಕಾರ್ಯದರ್ಶಿ ಲಕ್ಷ್ಮೀ, ಮುಖಂಡರಾದ ಗಿಡ್ನಳ್ಳಿ ನಾಗರಾಜ್, ಗುಂಡಿ ಮಂಜಪ್ಪ, ತೆಲಿಗಿ ಅಂಜಿನಪ್ಪ, ನಾಗರಾಜಪ್ಪ,  ಪ್ರಕಾಶ್, ಪೂಜಾರ ರಾಜು, ಆಲೂರು ಶ್ರೀನಿವಾಸ, ತೆಲಿಗಿ ನಾಗರಾಜ್ , ಚಿಕ್ಕೇರಿ ಯಂಕಪ್ಪ, ಕೆಂಗಳ್ಳಿ ಪ್ರಕಾಶ್, ಶಿವಣ್ಣ, ರಾಜಪ್ಪ, ಕಣಿವಿಹಳ್ಳಿ ಮಾರುತಿ, ಲಕ್ಷ್ಮಮ್ಮ, ರಾಯದುರ್ಗ ವಾಗೀಶ, ಪರಸಪ್ಪ  ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.