Home ಸುದ್ದಿಗಳು ವಾಲ್ಮೀಕಿ ಗುರುಪೀಠಕ್ಕೆ ಹರಪನಹಳ್ಳಿ ಭಕ್ತರು ಕೊಟ್ಟ ದೇಣಿಗೆ ಎಷ್ಟು ? ಇಲ್ಲಿದೆ ಮಾಹಿತಿ
ಸುದ್ದಿಗಳು

ವಾಲ್ಮೀಕಿ ಗುರುಪೀಠಕ್ಕೆ ಹರಪನಹಳ್ಳಿ ಭಕ್ತರು ಕೊಟ್ಟ ದೇಣಿಗೆ ಎಷ್ಟು ? ಇಲ್ಲಿದೆ ಮಾಹಿತಿ

Share
VALMIKI HARAPANAHALLI
Share

ಹರಪನಹಳ್ಳಿ : 8ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ಹರಪನಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಭರ್ಜರಿ ಸಿದ್ಧತೆ ನಡೆಸಲಾಗಿದೆ. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಂಚರಿಸಿ, ಸಮಾಜವನ್ನು ಸಂಘಟಿಸಿ ಹಾಗೂ ಜಾಗೃತಿ ಮೂಡಿಸುವ ಮೂಲಕ ಒಟ್ಟು ರೂ. 5,40,833 ದೇಣಿಗೆ ಸಂಗ್ರಹಿಸಲಾಗಿದೆ.

ಈ ಬೃಹತ್ ಮೊತ್ತವನ್ನು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಯವರಿಗೆ ಸಮರ್ಪಿಸಿ, ಅಧಿಕೃತವಾಗಿ ರಶೀದಿ ಪಡೆಯಲಾಯಿತು.

 8ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಅಧ್ಯಕ್ಷ ಆರ್. ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಹೆಚ್.ಕೆ. ಹಾಲೇಶ, ಕಾರ್ಯದರ್ಶಿ ಜಿಟ್ಟಿನಕಟ್ಟಿ ಹೆಚ್.ಕೆ. ಮಂಜುನಾಥ, ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ, ನಿವೃತ್ತ ಮುಖ್ಯ ಶಿಕ್ಷಕ ಎಸ್. ರೇವಣಸಿದ್ದಪ್ಪ, ಶಿಕ್ಷಕ ಎನ್.ಟಿ. ಸೋಮಪ್ಪ, ಎಸ್. ನಿಂಗಪ್ಪ, ಬೇಲೂರು ನಂಜಪ್ಪ, ಎಮ್. ಕರಿಬಸಪ್ಪ, ಯು. ಕೊಟ್ರೇಶ ಸೇರಿದಂತೆ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.