Home ಹರಪನಹಳ್ಳಿ: ಕ್ರೀಡೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧರಾಗಿ; ವೈ.ಡಿ. ಅಣ್ಣಪ್ಪ ಕರೆ
Homeಕೃಷಿ

ಹರಪನಹಳ್ಳಿ: ಕ್ರೀಡೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧರಾಗಿ; ವೈ.ಡಿ. ಅಣ್ಣಪ್ಪ ಕರೆ

Share
YARABALU YD ANNAPPA
Share

ಹರಪನಹಳ್ಳಿ : “ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಜೊತೆಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ ಸರ್ಕಾರಿ ನೌಕರಿ ಪಡೆಯಬೇಕು. ಆ ಮೂಲಕ ತಮ್ಮ ಕುಟುಂಬಗಳ ಆರ್ಥಿಕ ಏಳ್ಗೆಗೆ ಶ್ರಮಿಸಬೇಕು” ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಕಿವಿಮಾತು ಹೇಳಿದರು.

ತಾಲ್ಲೂಕಿನ ಯರಬಾಳು ಗ್ರಾಮದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ‘ಯರಬಾಳು ಕ್ರಿಕೆಟ್ ಪ್ರೀಮಿಯರ್ ಲೀಗ್’ (YCPL) ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜೂಜಾಟ ಬಿಟ್ಟು ಸಂಭ್ರಮದಿಂದ ಹಬ್ಬ ಆಚರಿಸಿ

ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ಯುವಕರೆಲ್ಲರೂ ಒಗ್ಗೂಡಿ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಚಾರ. ಆದರೆ ಹಬ್ಬದ ನೆಪದಲ್ಲಿ ಜೂಜಾಟವಾಡಿ ಹಣ ಕಳೆದುಕೊಳ್ಳಬಾರದು. ಬದಲಾಗಿ ಸಿಹಿ ಹಂಚಿ ಸಂಭ್ರಮಿಸಬೇಕು. ಪೋಷಕರಿಗೆ ಒಳ್ಳೆಯ ಹೆಸರು ತರುವಂತಹ ಸಾಧನೆ ಮಾಡುವತ್ತ ಯುವಜನತೆ ಗಮನಹರಿಸಬೇಕು ಎಂದು ಅವರು ತಿಳಿಸಿದರು.

ಗ್ರಾಮದ ಮುಖಂಡ ಪಾಟೀಲ ರಾಜನಗೌಡ್ರು ಮಾತನಾಡಿ, “ಗೆಳೆಯರ ಬಳಗದಿಂದ ಪ್ರತಿ ವರ್ಷ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಗ್ರಾಮದಲ್ಲಿ ಒಗ್ಗಟ್ಟು ಮೂಡಿಸಲು ಸಹಕಾರಿಯಾಗಿದೆ. ವರ್ಷದಿಂದ ವರ್ಷಕ್ಕೆ ಯುವಕರ ಉತ್ಸಾಹ ಇಮ್ಮಡಿಗೊಳ್ಳಲಿ” ಎಂದು ಹಾರೈಸಿದರು.

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ

ಶಿಕ್ಷಕ ಇಟಗಿ ನಾಗಪ್ಪ ಮಾತನಾಡಿ, “ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಫೂರ್ತಿಯಿಂದ ಆಟವಾಡಬೇಕು. ಗ್ರಾಮದ ಪ್ರತಿಯೊಂದು ಅಭಿವೃದ್ಧಿ ಕೆಲಸಗಳಲ್ಲಿ ಯುವಕರ ಪಾಲ್ಗೊಳ್ಳುವಿಕೆ ಅತ್ಯಗತ್ಯ” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಮಹಿಳಾ ಮುಖಂಡರಾದ ವನಜಾಕ್ಷಮ್ಮ, ವಿಷ್ಣು ಯರಬಾಳು, ಶಿವಾನಂದಪ್ಪ ಪಾಟೀಲ್, ನೀಲಗುಂದ ಮಂಜುನಾಥ್, ಪ್ರಸನ್ನ ಪಲ್ಲಕ್ಕಿ, ಅಂಗಡಿ ಮಲ್ಲಿಕಾರ್ಜುನ್, ತಿಮ್ಮೇನಹಳ್ಳಿ ಗಜೇಂದ್ರಪ್ಪ, ಸೋಮಣ್ಣ, ನಂದ್ಯಾಲ ಶಿವಕುಮಾರ್, ಎ.ಬಿ. ನಾಗೇಂದ್ರಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಗೊಲ್ಡನ್ ತಂಡಕ್ಕೆ ‘ಚಾಂಪಿಯನ್’ ಪಟ್ಟ

ತೀವ್ರ ಕುತೂಹಲ ಕೆರಳಿಸಿದ್ದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೊಲ್ಡನ್ ತಂಡ ಪ್ರಥಮ ಸ್ಥಾನ ಪಡೆದು 10 ಸಾವಿರ ರೂಪಾಯಿ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ರಾಜಧಾನಿ ತಂಡ ದ್ವಿತೀಯ ಸ್ಥಾನ ಪಡೆದು 4,500 ರೂಪಾಯಿ ನಗದು ಹಾಗೂ ಟ್ರೋಫಿ ಪಡೆದು ಸಂಭ್ರಮಿಸಿತು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.