Home ಸುದ್ದಿಗಳು ಹರಪನಹಳ್ಳಿ: ಹಿರೆಕೆರೆ ಒತ್ತುವರಿ ತೆರವಿಗೆ ಶಾಸಕಿ ಲತಾ ಮಲ್ಲಿಕಾರ್ಜುನ್ ಖಡಕ್ ಸೂಚನೆ
ಸುದ್ದಿಗಳು

ಹರಪನಹಳ್ಳಿ: ಹಿರೆಕೆರೆ ಒತ್ತುವರಿ ತೆರವಿಗೆ ಶಾಸಕಿ ಲತಾ ಮಲ್ಲಿಕಾರ್ಜುನ್ ಖಡಕ್ ಸೂಚನೆ

Share
HIREKERE, HARAPANAHALLI
Share

ಹರಪನಹಳ್ಳಿ: ಐತಿಹಾಸಿಕ ಹಿರೆಕೆರೆ ಉಳಿಸಲು ಮುಂದಾಗಿರುವ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಕೆರೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಿಗ್ ಶಾಕ್ ನೀಡಿದ್ದಾರೆ. 600 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿರುವ ಕೆರೆಯನ್ನು ಒತ್ತುವರಿ ಮಾಡಿಕೊಂಡವರಿಗೆ ತಕ್ಷಣವೇ ನೋಟಿಸ್ ಜಾರಿಗೊಳಿಸಿ, ನಿರ್ದಾಕ್ಷಿಣ್ಯವಾಗಿ ತೆರವು ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶನಿವಾರ ನಗರದ ಹಿರೆಕೆರೆ ಏರಿ ಮೇಲೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ₹3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಾಜ-ಮಹಾರಾಜರ ಕಾಲದ ಕೆರೆಗಳು ಅತ್ಯಂತ ವೈಜ್ಞಾನಿಕವಾಗಿವೆ. ಇವುಗಳಲ್ಲಿ ನೀರು ಸಂಗ್ರಹವಾದರೆ ಮಾತ್ರ ಈ ಭಾಗದಲ್ಲಿ ಅಂತರ್ಜಲ ಸಮೃದ್ಧವಾಗಿರುತ್ತದೆ. ಆದರೆ, ಸಾರ್ವಜನಿಕರು ಕೆರೆಗಳನ್ನು ಕಸದ ತೊಟ್ಟಿಗಳನ್ನಾಗಿ ಮಾಡುವುದನ್ನು ಮೊದಲು ನಿಲ್ಲಿಸಬೇಕು ಎಂದು ಶಾಸಕರು ಎಚ್ಚರಿಸಿದರು.

“ಈಗಾಗಲೇ ಪಟ್ಟಣದ ಅಯ್ಯನಕೆರೆ ಸಂಪೂರ್ಣ ಮಲಿನವಾಗಿದೆ. ನೂರು ಕೋಟಿ ರೂ. ಸುರಿದರೂ ಸ್ವಚ್ಛಗೊಳಿಸಲಾಗದಷ್ಟು ಹಾಳಾಗಿದೆ. ಕಳೆದ 10 ದಿನಗಳಿಂದ ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದರೂ, ಯಂತ್ರಗಳನ್ನು ಬಳಸಿದರೂ ಅಯ್ಯನಕೆರೆಯಲ್ಲಿನ ಕಸದ ಗುಡ್ಡೆ ಕರಗಿಲ್ಲ. ಈ ದುಸ್ಥಿತಿ ಹಿರೆಕೆರೆಗೆ ಬರಬಾರದು. ಈಗ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು” ಎಂದು ಅವರು ಮನವಿ ಮಾಡಿದರು.

ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಡಿ.ಅಬ್ದುಲ್ ರೆಹಮಾನ್, ಎಚ್. ವಸಂತಪ್ಪ,  ಎಂ.ವಿ.ಅಂಜಿನಪ್ಪ, ವೆಂಕಟೇಶ್, ಹುಲಿಕಟ್ಟೆ ಚಂದ್ರಪ್ಪ, ಇಜಂತಕರ ಮಂಜುನಾಥ, ಉಮಾ ಮಹೇಶ್ವರಿ, ಶಂಕರ, ಮಂಜನಾಯ್ಕ, ಸಲೀಂಸಾಬ್, ನಜೀರ್, ಲಾಟಿ ದಾದಾಪೀರ, ಗುಡಿ ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮುಖ್ಯಾಂಶಗಳು:
600 ಎಕರೆ ವಿಸ್ತೀರ್ಣದ ಹಿರೆಕೆರೆ ಒತ್ತುವರಿದಾರರಿಗೆ ಶೀಘ್ರವೇ ನೋಟಿಸ್.
₹3 ಕೋಟಿ ವೆಚ್ಚದ ಹಿರೆಕೆರೆ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕಿಯಿಂದ ಚಾಲನೆ.
ಅಯ್ಯನಕೆರೆ ದುಸ್ಥಿತಿ ಮರುಕಳಿಸದಿರಲು ಕೆರೆಗೆ ಕಸ ಹಾಕದಂತೆ ಸಾರ್ವಜನಿಕರಿಗೆ ಕಳಕಳಿಯ ಮನವಿ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.