Home ಹೊಂಬಳಗಟ್ಟಿ : ಎನ್‌.ಎಸ್‌.ಎಸ್.‌ ಶಿಬಿರ
Homeಸುದ್ದಿಗಳು

ಹೊಂಬಳಗಟ್ಟಿ : ಎನ್‌.ಎಸ್‌.ಎಸ್.‌ ಶಿಬಿರ

Share
ಹೊಂಬಳಗಟ್ಟಿ : ಎನ್‌.ಎಸ್‌.ಎಸ್.‌ ಶಿಬಿರ
Share

ಹರಪನಹಳ್ಳಿ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಲು ಎನ್‍.ಎಸ್.ಎಸ್.ಶಿಬಿರಗಳು ಸಹಕಾರಿ ಆಗುತ್ತವೆ ಎಂದು ಉಪನ್ಯಾಸಕ ಎಚ್.ಶಿವಾನಂದ ಹೇಳಿದರು.

ತಾಲ್ಲೂಕಿನ ಹೊಂಬಳಗಟ್ಟಿ ಗ್ರಾಮದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್. ಪದವಿ ಮಹಾವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಕರು ಸಮಾಜದ ವರ್ತಮಾನ ಮಾತ್ರವಲ್ಲ, ಭವಿಷ್ಯದ ಶಿಲ್ಪಿಗಳು. ಸೃಜನಶೀಲ ಗುಣ ಬೆಳೆಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದರು.

ಹಡಗಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಡಾ.ಭೀಮಪ್ಪ ಮಾತನಾಡಿ, ಉಳಿತಾಯ ಮತ್ತು ದೇಶದ ಅಭಿವೃದ್ದಿ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವ ಅಗತ್ಯವಿದೆ ಎಂದರು. ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ, ಪ್ರಾಚಾರ್ಯ ಮುತ್ತೇಶ, ಎನ್.ಎಸ್.ಎಸ್. ಅಧಿಕಾರಿ ಮಂಜುನಾಥ ಮಾಳ್ಗಿ, ಉಪನ್ಯಾಸಕ ಕೆ.ಕೊಟ್ರಗೌಡ, ಸಹಾಯಕ ಪ್ರಾಧ್ಯಾಪಕ ಹರಾಳು ಬುಳ್ಳಪ್ಪ, ಎಚ್.ಗುರುಬಸವರಾಜ, ಎ.ಗೀತಾ, ಭವಾನಿ, ನವೀನಕುಮಾರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.