ವಿಜಯನಗರ : ಹೊಸಪೇಟೆ ತಾಲೂಕಿನ ವಿವಿಧಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 05 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 51 ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ವಿಜ್ಞಾನ ಕಾಲೇಜ್ ಹತ್ತಿರ, ಸರ್ಕಾರಿ ಶಾಲೆ ಪಕ್ಕ ಅಮರಾವತಿ, ಹೊಸಪೇಟೆ ಇಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a comment