ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 05 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 45 ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದೆ.
ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬಂದಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಮರಾವತಿ, ವಿಜ್ಞಾನ ಕಾಲೇಜ್ ಹತ್ತಿರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Leave a comment