Home ಕುರಿ, ಕೋಳಿ ಸಾಕಾಣಿಕೆ ತರಬೇತಿ
Homeಸುದ್ದಿಗಳು

ಕುರಿ, ಕೋಳಿ ಸಾಕಾಣಿಕೆ ತರಬೇತಿ

Share
Share

ವಿಜಯನಗರ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಪಶು ಆಸ್ಪತ್ರೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆಸಕ್ತ ರೈರಿಗೆ ಸೆ.22 ರಿಂದ ಸೆ.23 ರವರೆಗೆ ಆಧುನಿಕ ಹೈನುಗಾರಿಕೆ, ಕುರಿ ಹಾಗೂ ಕೋಳಿ ಸಾಕಾಣಿಕೆ ಮತ್ತು ಮೇಕೆ ಸಾಕಾಣಿಕೆಯ ವೈಜ್ಞಾನಿಕ ನಿರ್ವಹಣೆ ಕುರಿತು ಎರಡು ದಿನಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು 18 ರಿಂದ 60 ವರ್ಷ ವಯೋಮಾನದ ಆಸಕ್ತ ಮಹಿಳಾ ಮತ್ತು ಪುರುಷ ರೈತರು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸೆ.19ರೊಳಗಾಗಿ ಹೊಸಪೇಟೆ ಪಶು ಆಸ್ಪತ್ರೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿಗೆ ಸೀಮಿತ ಸಂಖ್ಯೆಯ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುವುದರಿಂದ, ಮೊದಲು ನೋಂದಾಯಿಸಿಕೊಂಡ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತ ರೈತರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.